Ad Widget

ನಾಳೆ (ಡಿ.14)ದುಗ್ಗಲಡ್ಕದಲ್ಲಿ ನಮ್ಮ ಕ್ಲಿನಿಕ್ ಉದ್ಘಾಟನೆ – ಉಚಿತವಾಗಿ 12 ಸೇವೆಗಳು ಲಭ್ಯ

. . . . . .

ಆರೋಗ್ಯ ಸೇವೆಯನ್ನು ಇನ್ನಷ್ಟೂ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಸರಕಾರ ನೂತನ ಯೋಜನೆಯಾದ ನಮ್ಮ ಕ್ಲಿನಿಕ್ ಅನ್ನು ರಾಜ್ಯದ ವಿವಿಧೆಡೆ ಆರಂಭಿಸಲಿದೆ. ಈ ಯೋಜನೆಯ ಮುಖಾಂತರ ದುಗ್ಗಲಡ್ಕದಲ್ಲಿ ಕೂಡ ನಮ್ಮ ಕ್ಲಿನಿಕ್ ಡಿ. 14 ರಂದು ಉದ್ಘಾಟನೆಗೊಳ್ಳಲಿದೆ.

ಉದ್ಘಾಟನೆಯನ್ನು ಮೀನುಗಾರಿಕೆ ಬಂದರು ಮತ್ತು ಒಳನಾಡು ಬಲಸಾರಿಗೆ ಸಚಿವ ಎಸ್. ಅಂಗಾರ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ನ.ಪಂ.ಅಧ್ಯಕ್ಷ ವಿನಯಕುಮಾರ ಕಂದಡ್ಕ, ಮುಖ್ಯ ಅಥಿತಿಗಳಾಗಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಎ.ವಿ.ತೀರ್ಥರಾಮ, ತಹಶೀಲ್ದಾರ್ ಕು| ಅನಿತಾಲಕ್ಷ್ಮೀ, ತಾ.ಪಂ., ಇಓ ಭವಾನಿಶಂಕರ್ ಎನ್, ನಗರ ಪಂಚಾಯತ್ ಸದಸ್ಯರಾದ ಶ್ರೀಮತಿ ಶಶಿಕಲಾ ಎ,ಬಾಲಕೃಷ್ಣ ರೈ,ಕಟ್ಟಡ ಮಾಲಕ ಶ್ಯಾಮ್ ಭಟ್‌ ದುಗ್ಗಲಡ್ಕ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಮತ್ತು ಸುಳ್ಯ ತಾಲೂಕು ನೋಡೆಲ್‌ ಅಧಿಕಾರಿ ಡಾ| ಜಗದೀಶ್ ಕೆ. ಭಾಗವಹಿಸಲಿದ್ದಾರೆ.

‘ನಮ್ಮ ಕ್ಲಿನಿಕ್’ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯವಿರಲಿದೆ ಎಂದು ಸರಕಾರ ಹೇಳಿದೆ. ಗರ್ಭಿಣಿ ಮತ್ತು ಜನನ ಸಮಯದ ಅರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರೆಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ, ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ, ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್, ಬಾಯಿಯ ಆರೋಗ್ಯ ಸಮಸ್ಯೆಗಳು, ಕಣ್ಣಿನ ತಪಾಸಣೆ, ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಸೇವೆಗಳು ಲಭ್ಯ, ಜತೆಗೆ ವೃದ್ಧಾಪ್ಯ ಆರೈಕೆ, ತುರ್ತು ವೈದ್ಯಕೀಯ ಸೇವೆಗಳು, ಉಚಿತ ಆರೋಗ್ಯ ತಪಾಸಣೆ ಸೇರಿದಂತೆ ಔಷಧಗಳು ಸಂಪೂರ್ಣ ಉಚಿತವಾಗಿ ದೊರೆಯಲಿವೆ. 14 ಪ್ರಯೋಗ ಶಾಲಾ ಪರೀಕ್ಷೆಗಳು ಇಲ್ಲಿ ಲಭ್ಯವಿದ್ದು, ಟೆಲಿ ಕನ್ಸಲೇಷನ್‌ ಸರ್ವೀಸಸ್, ಕ್ಷೇಮ ಚಟುವಟಿಕೆಗಳು ಕೂಡ ಉಚಿತವಾಗಿವೆ ಎಂದು ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಮಾಧ್ಯಮಕ್ಕೆ ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!