ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ ಸ್ಪರ್ಶ ಕಾರ್ಯಕ್ರಮವು ಡಿ.೦೮ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಮರ್ಚಂಟ್ ನೇವಿಯ ನಿವೄತ್ತ ಮುಖ್ಯ ಇಂಜಿನಿಯರ್ ದೇರಾಜೆ ಮೋನಪ್ಪ ಗೌಡರವರು ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಾದ ನೀವು ಜೀವನದಲ್ಲಿ ಒಂದು ಮುಖ್ಯ ಗುರಿಯನ್ನು ಇಟ್ಟುಕೊಂಡು ಅದನ್ನು ಸಾಧಿಸುವ ಛಲ ನಿಮ್ಮಲ್ಲಿರಬೇಕು ಎಂದು ಹೇಳಿ ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಹಾರೈಸಿದರು. ಇದೇ ಸಂದರ್ಭದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ.ಯವರು ಮಾತನಾಡಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗವು ಈ ಬಾರಿಯ ಪ್ರವೇಶಾತಿಯಲ್ಲಿ ಅಧಿಕ ವಿದ್ಯಾರ್ಥಿಗಳು ಸೇರ್ಪಡೆಯಾಗಿದ್ದು ಅದು ಕಾಲೇಜಿನ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಹೇಳಿ ಈ ಏಳಿಗೆಗೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಪರಿಶ್ರಮವೇ ಕಾರಣ ಎಂದು ಹೇಳಿ ಅಭಿನಂದಿಸಿದರು.
ಇದೇ ಸಂದರ್ಭದಲ್ಲಿ ಸಮಾರಂಭದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಸುರೇಶ ವಿ. ಯವರು ವಹಿಸಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಉಮಾಶಂಕರ್ ಕೆ.ಎಸ್. ಮಾತನಾಡಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಸೋಸಿಯೇಶನ್ ನಡೆಸುವ ಎಲ್ಲಾ ಕಾರ್ಯಕ್ರಮಗಳು ಹಾಗೂ ಇದರಿಂದ ವಿದ್ಯಾರ್ಥಿಗಳಿಗೆ ಸಿಗುವ ಜ್ಞಾನಗಳ ಬಗ್ಗೆ ವಿವರಣೆ ನೀಡಿದರು ಜೊತೆಗೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಸೇರ್ಪಡೆಗೊಳ್ಳುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಸಂಯೋಜಕರಾದ ಪ್ರೊ. ಅಭಿಜ್ಞ ಬಿ.ಬಿ., ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಆರ್., ಕಾರ್ಯದರ್ಶಿ ಧೀಮಂತ್ ಜೆ.ಎನ್., ಬೋಧಕ ಮತ್ತು ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿವೃಂದ ಉಪಸ್ಥಿತರಿದ್ದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ್ ಆರ್ ಸ್ವಾಗತಿಸಿ, ಚರೀಷ್ಮಾ ಕಡಪಳ ಪ್ರಾರ್ಥಿಸಿದರು. ಫ್ರಾನ್ಸಿಸ್ ಡಿಸೋಜ ವಂದಿಸಿದರು. ಗೌತಮ್ ಪೊನ್ನಣ್ಣ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಮುಖ್ಯ ಅತಿಥಿಯವರಿಂದ “Life Experience in Indian Navey and Marchant Navey” ವಿಷಯದ ಕುರಿತು ತಾಂತ್ರಿಕ ಉಪನ್ಯಾಸ ನಡೆಯಿತು, ನಂತರ ವಿದ್ಯಾರ್ಥಿಗಳಿಂದ ಮ್ಯಾಷ್‌ಅಪ್ ಸಂಜೆ, ಫ್ಲಾಶ್‌ಮೊಬ್ ಹಾಗೂ ಇನ್ನಿತರ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.
- Thursday
- November 21st, 2024