
ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ನಡೆದ ವಸತಿ ಶಾಲೆಗಳ ವಿಭಾಗೀಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ, ಉಪ್ಪಿನಂಗಡಿಯ ಡಾ. ಬಿ. ಆರ್ ಅಂಬೇಡ್ಕರ್ ವಸತಿ ಶಾಲೆಯ ಸ್ವಪ್ನ ನೇಲ್ಯಡ್ಕ ಭಾವಗೀತೆ ಗಾಯನ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದಿದ್ದಾರೆ. ಇವರು ಕೇನ್ಯ ಗ್ರಾಮದ ನೇಲ್ಯಡ್ಕ ವಿಶ್ವನಾಥ ಹಾಗೂ ಶಶಿಕಲಾ ದಂಪತಿಗಳ ಪುತ್ರಿ.