Ad Widget

ಆರೋಗ್ಯಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಿ – ಸಚಿವ ಅಂಗಾರ – ದುಗ್ಗಲಡ್ಕದಲ್ಲಿ ನಮ್ಮ ಕ್ಲಿನಿಕ್ ಸೇವೆ ಆರಂಭ

ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಪ್ರಾರಂಭಿಸುತ್ತಿರುವ “ನಮ್ಮ ಕ್ಲಿನಿಕ್” ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯ ದುಗ್ಗಲಡ್ಕದಲ್ಲಿ ಡಿ.14ರಂದು ಕಾರ್ಯಾರಂಭಗೊಂಡಿತು. ನಮ್ಮ ಕ್ಲಿನಿಕ್ ಆರೋಗ್ಯ ಕೇಂದ್ರವನ್ನು ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಎಸ್.ಅಂಗಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಸರಕಾರದ ಯೋಜನೆಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ...

ಡಿ.17 ರಂದು ಪಂಬೆತ್ತಾಡಿಯಲ್ಲಿ ಗ್ರಾಮ ವಾಸ್ತವ್ಯ – ಪೂರ್ವಭಾವಿ ಸಭೆ

ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದಲ್ಲಿ ಡಿ.17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಸುಳ್ಯ, ಬಿ-ಗ್ರೇಡ್ ತಹಶೀಲ್ದಾರರು ತಾಲೂಕು ಕಛೇರಿ ಸುಳ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಸಿ.ಡಿ.ಪಿ.ಯು ಸುಳ್ಯ ತಾಲೂಕು,...
Ad Widget

ಪೆರಾಜೆ : ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ಪ್ರಾತ್ಯಕ್ಷಿಕೆ

ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಕೊಡಗು ಮತ್ತು ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಜಂಟಿ ಆಶ್ರಯದಲ್ಲಿ ಕೊಕ್ಕೋ ಬೆಳೆಯ ಸಮಗ್ರ ನಿರ್ವಹಣೆ ಮತ್ತು ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ ಬಗ್ಗೆ ವಿಚಾರಗೋಷ್ಠಿ ಮತ್ತು ಪ್ರಾತ್ಯಕ್ಷಿಕೆಯು ಡಿ.14 ರಂದು ಸಹಕಾರ ಸದನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರು ಹಾಗೂ ತಾಲೂಕು ಸಾಗುವುಳಿ...

ದೇವಚಳ್ಳ : ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಗುದ್ದಲಿಪೂಜೆ

ದೇವಚಳ್ಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 95ಲಕ್ಷ ವೆಚ್ಚದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳು ನಡೆಯಲಿದ್ದು, ಇದರ ಗುದ್ದಲಿ ಪೂಜಾ ಕಾರ್ಯಕ್ರಮ ಇಂದು ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್ ಅಂಗಾರ ಗುದ್ದಲಿ ಪೂಜೆ ನೆರವೇರಿಸಿದರು.ಕರ್ನಾಟಕ ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ,ಹಿರಿಯ ಮುಖಂಡರಾದ ತಳೂರು ಚಂದ್ರಶೇಖರ, ದ.ಕ.ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ವೆಂಕಟ್...

ಗೌಡ ಸಂಘದ ಮೈಸೂರು ಜಿಲ್ಲಾಧ್ಯಕ್ಷರಾಗಿ ವಿಶ್ವನಾಥ್ ದೇವಶ್ಯ – ಕಾರ್ಯದರ್ಶಿಯಾಗಿ ಜಿನ್ನಪ್ಪ ಕೊಲ್ಲಮೊಗ್ರ ಆಯ್ಕೆ

ದ.ಕ‌.ಜಿಲ್ಲಾ ಗೌಡ ಸಂಘ ಮೈಸೂರು ಇದರ ಅಧ್ಯಕ್ಷರಾಗಿ ವಕೀಲ,ಗುತ್ತಿಗಾರಿನ ವಿಶ್ವನಾಥ ದೇವಶ್ಯ ಆಯ್ಕೆ ಯಾಗಿದ್ದಾರೆ. ಉಪಾಧ್ಯಕ್ಷರಾಗಿ ಧನಂಜಯ ನೆಲ್ಯಾಡಿ, ಕಾರ್ಯದರ್ಶಿಯಾಗಿ ಬಿ.ಇ.ಎಂ.ಎಲ್.ಉದ್ಯೋಗಿ ಜಿನ್ನಪ್ಪ ಕೊಲ್ಲಮೊಗ್ರ, ಖಜಾಂಜಿಯಾಗಿ ರಾಘವ ಕಡಪಾಲ,ಸಂಘಟನಾ ಕಾರ್ಯದರ್ಶಿಯಾಗಿ ಮೋಹನ್ ಎಡಮಂಗಲ, ಜತೆ ಕಾರ್ಯದರ್ಶಿಯಾಗಿ ರುದ್ರಪ್ಪ ಪಿಂಡಿಮನೆ ಹಾಗೂ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರ ಭೇಟಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಹೈಕೋರ್ಟ್ ನ್ಯಾಯಧೀಶರಾದ ಇಂದಿರೇಶ್ ರವರು ಡಿ.10 ರಂದು ಭೇಟಿ ನೀಡಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿದರು.ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ ವೆಂಕಟಕೃಷ್ಣ ರಾವ್, ಸಿಬ್ಬಂದಿ ವಸಂತ ಆಚಾರ್ಯ ಹಾಗೂ...

ಸಂಪಾಜೆ ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾಗಿ ಸೋಮಶೇಖರ್ ಪೈಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ವೇದಿಕೆಯ ಸಂಪಾಜೆ ವಲಯದ ಅಧ್ಯಕ್ಷರಾಗಿ ಸೋಮಶೇಖರ್ ಪೈಕ ಆಯ್ಕೆಯಾಗಿದ್ದಾರೆ. ಇವರು ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ, ವಿಶ್ವ ಹಿಂದೂ ಪರಿಷತ್ ಸುಳ್ಯ ಪ್ರಖಂಡ ಇದರ ಅಧ್ಯಕ್ಷರಾಗಿ, ತಾಲೂಕು ಭಜನಾ ಪರಿಷತ್ ನ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ

ವಿನ್ಯಾಸ್ ಜಾಕೆ ಮಿಮಿಕ್ರಿ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

ಸರಕಾರಿ ಪದವಿಪೂರ್ವ ಕಾಲೇಜು ಸುಳ್ಯ ಇಲ್ಲಿ ಡಿಸೆಂಬರ್ 13ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಮಿಮಿಕ್ರಿ ಸ್ಪರ್ಧೆಯಲ್ಲಿ ಎಣ್ಮೂರು ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿ ವಿನ್ಯಾಸ್ ಜಾಕೆ ಪ್ರಥಮ ಸ್ಥಾನ ಪಡೆದು ಶಿವಮೊಗ್ಗದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.ಇವರು ಸುವರ್ಣ ಜಾಕೆ ಮತ್ತು ಶ್ರೀಮತಿ ಸುಹಾಸಿನಿ ಜಾಕೆ ದಂಪತಿಗಳ ಸುಪುತ್ರ.
error: Content is protected !!