
ಕಲ್ಮಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಬೆತ್ತಾಡಿ ಗ್ರಾಮದಲ್ಲಿ ಡಿ.17 ರಂದು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಇದರ ಅಂಗವಾಗಿ ಇಂದು ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯತ್ ಸುಳ್ಯ, ಬಿ-ಗ್ರೇಡ್ ತಹಶೀಲ್ದಾರರು ತಾಲೂಕು ಕಛೇರಿ ಸುಳ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರು, ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಹಾಗೂ ಸದಸ್ಯರುಗಳು, ಸಿ.ಡಿ.ಪಿ.ಯು ಸುಳ್ಯ ತಾಲೂಕು, ಸಹಾಯಕ ಯುವ ಸಬಲೀಕರಣ ಕ್ರೀಡಾಧಿಕಾರಿ ಸುಳ್ಯ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಕಂದಾಯ ಪರಿವೀಕ್ಷಕರು ಪಂಜ, ಗ್ರಾಮ ಆಡಳಿತ ಅಧಿಕಾರಿ ಪಂಬೆತ್ತಾಡಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಉಪವಲಯ ಅರಣ್ಯಾಧಿಕಾರಿ ಪಂಜ ಶಾಖೆ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ, ಉಪವಲಯ ಸಾಮಾಜಿಕ ಅರಣ್ಯ ಅಧಿಕಾರಿ, ಗ್ರಾಮ ಸಹಾಯಕರು ಪಂಬೆತ್ತಾಡಿ ಮತ್ತು ಕಲ್ಮಡ್ಕ ಗ್ರಾಮ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.