
ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿ.16 ರಿಂದ ಡಿ.20 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಬ್ರಹ್ಮರಥೋತ್ಸವ ನೆರವೇರಲಿದೆ.
ಡಿ.16 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಮಹಾರಂಗ ಪೂಜೆ, ಉತ್ಸವ ಬಲಿ, ಪಲ್ಲಕ್ಕಿ ಉತ್ಸವ, ವಸಂತಕಟ್ಟೆ ಪೂಜೆ, ಅಷ್ಟಾವಧಾನ ಸೇವೆ, ಮಂತ್ರಾಕ್ಷತೆ, ಅನ್ನಸಂತರ್ಪಣೆ, ಡಿ.18 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೋತ್ಸವ, ಧ್ವಜಾರೋಹಣ, ಮಹಾರಂಗ ಪೂಜೆ, ಡಿ.19 ರಂದು ಶ್ರೀ ದೇವರ ಬಲಿ ಹೊರಟು ಶ್ರೀ ದೇವರ
ಬ್ರಹ್ಮರಥಾರೋಹಣ, ರಾತ್ರಿ 9.30ರಿಂದ ಶ್ರೀ ದೇವರ ಬ್ರಹ್ಮರಥೋತ್ಸವ, ಸಿಡಿಮದ್ದು ಪ್ರದರ್ಶನ, ಡಿ.20 ರಂದು ಉತ್ಸವ ಬಲಿ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾಜಾಂಗಣ ಪ್ರಸಾದ, ಸಾಯಂಕಾಲ ಅವಭೃತೋತ್ಸವ ನಡೆಯಲಿದೆ.
