
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯ ಇದರ ವತಿಯಿಂದ ಡಿ.01 ರಿಂದ ಡಿ.15 ರವರೆಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆದ ಉಚಿತ ಯೋಗ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಡಿ.15 ರಂದು ಬೆಳಿಗ್ಗೆ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಿತು.
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಅಧ್ಯಕ್ಷರಾದ ಲ.ಪ್ರೋ.ರಂಗಯ್ಯ ಶೆಟ್ಟಿಗಾರ್ ಅವರು ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು ಅವರು ಸಮಾರೋಪ ಭಾಷಣ ಮಾಡಿದರು ಹಾಗೂ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.
ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಕೃಷ್ಣಪ್ರಸನ್ನ ಕಟ್ಟ ಇವರನ್ನು ಸನ್ಮಾನಿಸಲಾಯಿತು.
ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಖಜಾಂಜಿ ಲ.ರಾಮಚಂದ್ರ ಪಳಂಗಾಯ, ಲಯನ್ಸ್ ಕ್ಲಬ್ ಕುಕ್ಕೆ ಸುಬ್ರಹ್ಮಣ್ಯದ ಕಾರ್ಯದರ್ಶಿ ಲ.ಸತೀಶ್ ಕೂಜುಗೋಡು, ಲಯನ್ಸ್ ಕ್ಲಬ್ ನ ಲ.ರೇಗನ್ ಶೆಟ್ಟಿಯಡ್ಕ, ಲ.ವಿಮಲಾ ರಂಗಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಲ.ವಿಮಲಾ ರಂಗಯ್ಯ ಕಾರ್ಯಕ್ರಮ ನಿರೂಪಿಸಿದರು. ಲ.ರಾಮಚಂದ್ರ ಪಳಂಗಾಯ ಧನ್ಯವಾದ ಸಮರ್ಪಿಸಿದರು.
ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.
(ವರದಿ : ಉಲ್ಲಾಸ್ ಕಜ್ಜೋಡಿ)