ನಾಲ್ಕೂರು ಗ್ರಾಮದ ಮರಕತ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಡಿ.16 ರಂದು ಪ್ರವಾಸೋದ್ಯಮ ಮತ್ತು ಪರಿಸರ ಖಾತೆ ಸಚಿವರಾದ ಆನಂದ್ ಸಿಂಗ್ ಹಾಗೂ ಮನೆಯವರು ಭೇಟಿ ನೀಡಿ ದೇವರ ದರುಶನ ಪಡೆದರು.
ಈ ಸಂದರ್ಭದಲ್ಲಿ ಗುತ್ತಿಗಾರು ಗ್ರಾಮ ಪಂಚಾಯತ್ ಸದಸ್ಯರಾದ ವಿಜಯ ಕುಮಾರ್ ಚಾರ್ಮತ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಶಾಮಯ್ಯ ಚೆಮ್ನೂರು, ಮೋಹನಾಂಗಿ ಹುದೇರಿ, ದೇವಸ್ಥಾನದ ಅರ್ಚಕರಾದ ಮಹಾಬಲ ಭಟ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)
- Thursday
- November 21st, 2024