ಡಿ.20ರಿಂದ ಡಿ.22ರವರೆಗೆ 3 ದಿನಗಳ ಕಾಲ ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ಗ್ರಾಮ ವಾಸ್ತವ್ಯ ಮತ್ತು ಸಮುದಾಯ ಸಮ್ಮೀಲನ ಹಾಗೂ ಗುರುವಂದನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರನ್ನು ಮತ್ತು ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರನ್ನು ನಿಂತಿಕಲ್ಲಿನಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿಯವರು ತುಳಸಿ ಹಾರ ಹಾಕಿ ಸ್ವಾಗತಿಸಿ ಬರ ಮಾಡಿಕೊಂಡರು.
ಈ ಸಂದರ್ಭದಲ್ಲಿ ಕೆ.ವಿ.ಜಿ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಾ ಹಣಾಧಿಕಾರಿ ಡಾ. ಉಜ್ವಲ್ ಊರುಬೈಲು, ಸಮಾಜದ ಗಣ್ಯರುಗಳಾದ ಎನ್.ಎ ರಾಮಚಂದ್ರ, ನಿತ್ಯಾನಂದ ಮುಂಡೋಡಿ, ಭರತ್ ಮುಂಡೋಡಿ, ಎಸ್.ಎನ್ ಮನ್ಮಥ, ಪಿ.ಎಸ್ ಗಂಗಾಧರ, ದಿನೇಶ್ ಮಡಪ್ಪಾಡಿ, ಎ.ವಿ ತೀರ್ಥರಾಮ, ಹರೀಶ್ ಕಂಜಿಪಿಲಿ, ಸುನೀಲ್ ಕೇರ್ಪಳ, ಸಂತೋಷ್ ಜಾಕೆ, ಜಾಕೆ ಸದಾನಂದ, ಹೇಮಚಂದ್ರ ಕದಿಕಡ್ಕ, ಕೂಸಪ್ಪ ಗೌಡ ಮುಗೇಪು, ಕೆ.ವಿ.ಜಿ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲರುಗಳು, ಭೋದಕ ಭೋದಕೇತರ ಸಿಬ್ಬಂದಿಗಳು ಮತ್ತು ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Thursday
- November 21st, 2024