ಸುಳ್ಯ ಪೊಲೀಸ್ ಇಲಾಖೆ ವತಿಯಿಂದ ಅಪರಾಧ ತಡೆ ಮಾಸಾಚರಣೆ 2022 ಅಂಗವಾಗಿ ಇಂದು ನಗರದ ಮುಖ್ಯ ಬೀದಿಗಳಲ್ಲಿ ಜಾಗೃತಿ ಅರಿವು ಕಾಲ್ನಡಿಗೆ ಜಾಥಾ ಹಾಗೂ ಮಾಹಿತಿ ಅರಿವು ಕಾರ್ಯಕ್ರಮ ನಡೆಯಿತು.
ಸುಳ್ಯ ಪೊಲೀಸ್ ಠಾಣಾ ಉಪನಿರೀಕ್ಷಕ ದಿಲೀಪ್ ರವರ ನೇತೃತ್ವದಲ್ಲಿ ಜ್ಯೋತಿ ಸರ್ಕಲ್ ನಿಂದ ಗಾಂಧಿನಗರದವರೆಗೆ ಕಾಲ್ನಡಿಗೆ ಮೂಲಕ ಸಂಚರಿಸಿ ನಗರದ ಪ್ರಮುಖ ಸ್ಥಳಗಳಲ್ಲಿ ಜಾಗೃತಿ ಅರಿವು ನೀಡುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು.
ಕಾಲ್ನಡಿಗೆ ಜಾಥಾದಲ್ಲಿ ಆಟೋ ಚಾಲಕರು, ಟೂರಿಸ್ಟ್ ವ್ಯಾನ್ ಮತ್ತು ಕಾರು ಚಾಲಕರು ಸಾರ್ವಜನಿಕರು ಭಾಗವಹಿಸಿದ್ದರು. ಸುಳ್ಯ ಠಾಣಾ ಪ್ರೊಬೆಷನರಿ ಎಸ್ ಐ, ಅಪರಾಧ ವಿಭಾಗದ ಎಸ್ ಐ ರತ್ನಕುಮಾರ್, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.