ಪೆರುವಾಜೆ ಗ್ರಾಮದ ಕೊಲ್ಯ-ಪೆರುವಾಜೆ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ, ಸತ್ಯನಾರಾಯಣ ಪೂಜೆ ಹಾಗೂ ವರ್ಷಾವಧಿ ಕೊರಗಜ್ಜನ ನೇಮೋತ್ಸವವು ಡಿ.30 ಶುಕ್ರವಾರದಂದು ನಡೆಯಲಿದೆ. ಬೆಳಿಗ್ಗೆ ಗಂಟೆ 8.00ಕ್ಕೆ ಗಣಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆದು ರಾತ್ರಿ ಗಂಟೆ 8.00ಕ್ಕೆ ಅನ್ನಸಂತರ್ಪಣೆ ನಡೆಯಲಿದೆ. ಬಳಿಕ ರಾತ್ರಿ ಗಂಟೆ 9.00ರಿಂದ ಶ್ರೀ ಕೊರಗಜ್ಜ ದೈವದ ನೇಮೋತ್ಸವ ಜರುಗಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಆಗಮಿಸಿ ಶ್ರೀ ದೈವದೇವರ ಪ್ರಸಾದವನ್ನು ಸ್ವೀಕರಿಸುವಂತೆ ಶ್ರೀಮತಿ ಮತ್ತು ಶ್ರೀ ಪೊಡಿಯ ಹಾಗೂ ಕುಟುಂಬಸ್ಥರು ವಿನಂತಿಸಿದ್ದಾರೆ.
- Wednesday
- December 4th, 2024