ಸುಳ್ಯದ ಕೇರ್ಪಳದಲ್ಲಿ ಬಂಟರ ಸಂಘದಿಂದ ವತಿಯಿಂದ ನಿರ್ಮಾಣಗೊಂಡ ನೂತನ ಬಂಟರ ಸಮುದಾಯ ಭವನವನ್ನು ಆಶಾ ಪ್ರಕಾಶ್ ಶೆಟ್ಟಿ ಉದ್ಘಾಟಿಸಿದರು. ಮುಂಬೈಯ ಹೇರಂಭಾ ಗ್ರೂಪ್ ಕೇರ್ ಲಿಮಿಟೆಡ್‌ನ ನಿರ್ದೇಶಕರಾದ ಕೂಳೂರು ಕನ್ಯಾನ ಸದಾಶಿವ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ರಮಾನಾಥ ರೈ,ರಾಜ್ಯ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎ.ವಿ.ತೀರ್ಥರಾಮ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ.ಕೆ.ವಿ. ರೇಣುಕಾಪ್ರಸಾದ್, ಬೆಂಗಳೂರು ಸಹಕಾರ ನಗರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಗುರುಪ್ರಸಾದ್ ರೈ ಮೊರಂಗಲ್ಲು, ಸುಳ್ಯ ಚೆನ್ನಕೇಶವ ದೇವಸ್ಥಾನದ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ, ಲಯನ್ಸ್ ಮಾಜಿ ರಾಜ್ಯಪಾಲ ಎಂ.ಬಿ. ಸದಾಶಿವ, ನ.ಪಂ. ಅಧ್ಯಕ್ಷ ವಿನಯಕುಮಾರ್ ಕಂದಡ್ಕ ಉಪಸ್ಥಿತರಿದ್ದರು.
- Wednesday
- December 4th, 2024