ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಸ್ಮೃತಿ ಇರಾನಿ ಅವರು ಡಿ.27 ರಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.
ಬೆಳಿಗ್ಗೆ ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ದೇವರ ದರುಶನ ಪಡೆದು ವಿಶೇಷ ಪೂಜೆ ಹಾಗೂ ಮಹಾಭಿಷೇಕ ಸೇವೆ ಮಾಡಿಸಿದರು.
ಕಿರುಷಷ್ಠಿ ಸಭಾಭವನದಲ್ಲಿ ಸಚಿವರು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದರು. ಆನಂತರ ಮದ್ಯಾಹ್ನ ಮಹಾಪೂಜೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಮೋಹನ್ ರಾಮ್ ಸುಳ್ಳಿ ಹಾಗೂ ಸದಸ್ಯರಾದ ಪ್ರಸನ್ನ ದರ್ಬೆ, ಶ್ರೀವತ್ಸ, ಪಿ.ಜಿ.ಎಸ್.ಎನ್ ಪ್ರಸಾದ್, ಮನೋಹರ ರೈ, ಶೋಭಾ ಗಿರಿಧರ್, ವನಜಾ ಭಟ್, ಲೋಕೇಶ್, ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ.ನಿಂಗಯ್ಯ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಪುಷ್ಪಲತಾ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
(ವರದಿ : ಉಲ್ಲಾಸ್ ಕಜ್ಜೋಡಿ)
- Friday
- November 1st, 2024