ಸುಳ್ಯದ ಬಹುದಿನಗಳ ಬೇಡಿಕೆಯಾದ 110 ಕೆ.ವಿ. ವಿದ್ಯುತ್ ಸಬ್ ಸ್ಟೇಷನ್ ಹಾಗೂ ವಿದ್ಯುತ್ ಲೈನ್ ಕಾಮಗಾರಿಗೆ ಇಂಧನ ಸಚಿವ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್ ಕುಮಾರ್ ಇಂದು ಗುದ್ದಲಿಪೂಜೆ ನೆರವೇರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ವಹಿಸಿದ್ದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಎ.ವಿ.ತೀರ್ಥರಾಮ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತಿಮ್ಮಪ್ಪ ಶೆಟ್ಟಿ, ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಂಜಪ್ಪ, ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ ಕಂದಡ್ಕ,ನ.ಪಂ.ಉಪಾಧ್ಯಕ್ಷೆ ಸರೋಜಿನಿ ಪೆಲ್ತಡ್ಕ, ನ.ಪಂ.ಸದಸ್ಯೆ ಶೀಲಾವತಿ ಕುರುಂಜಿ, ಮೆಸ್ಕಾಂ ನಿರ್ದೇಶಕ ಮಂಜಪ್ಪ, ಕೆಪಿಟಿಸಿಎಲ್ ಮುಖ್ಯ ಇಂಜಿನಿಯರ್
ಮಂಜುನಾಥ ಶ್ಯಾನುಭೋಗ್, ತಹಶೀಲ್ದಾರ್ ಕು.ಅನಿತಾಲಕ್ಷ್ಮೀ, ಕೆಪಿಟಿಸಿಎಲ್ ನ ಅಧಿಕಾರಿಗಳಾದ ಪುಷ್ಪಾ, ಕೃಷ್ಣರಾಜ್, ಉಮೇಶ್ ಉಪಸ್ಥಿತರಿದ್ದರು. ಕೆಪಿಟಿಸಿಎಲ್ ಅಧೀಕ್ಷಕ ಇಂಜಿನಿಯರ್ ರವಿಕಾಂತ್ ಕಾಮತ್ ಸ್ವಾಗತಿಸಿದರು.