Ad Widget

ಜ.15 – ಜ.21 : ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ಜಾತ್ರಾ ಮಹೋತ್ಸವ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಜ.15 ರಿಂದ ಜ.21 ರವರೆಗೆ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜ.10 ರಂದು ಬೆಳಿಗ್ಗೆ ಗಂಟೆ 9.30ಕ್ಕೆ ಗೊನೆ ಮುಹೂರ್ತ ಕಾರ್ಯಕ್ರಮ ನಡೆಯಿತು.

. . . . . . . . .

ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ದಿ, ಪ್ರಾಸಾದ ಶುದ್ದಿ , ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ಪ್ರಸಾದ ವಿತರಣೆ ನಡೆಯಲಿದೆ. ಜ.16 ರಂದು ಬೆಳಿಗ್ಗೆ ಗಂಟೆ 9-10 ರಿಂದ 9-45 ರ ಕುಂಭ ಲಗ್ನದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ, ಸಾನ್ನಿಧ್ಯ ಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಜ.16 ರಂದು ಬೆಳಿಗ್ಗೆ ಗಂಟೆ 10.00 ಕ್ಕೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಗಂಟೆ 7.00 ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ ನಡೆಯಲಿದೆ. ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ. ಜ.17 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಜ.18 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಲಿದೆ. ಈ ದಿನ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಲಿರುವುದು. ಜ.19 ರಂದು ಬೆಳಿಗ್ಗೆ ಗಂಟೆ 8.30ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಸವಾರಿ ಹೋಗಿ ಬಂದು ಬೆಡಿಕಟ್ಟೆಯಲ್ಲಿ ಸಿಡಿಮದ್ದು ಪ್ರದರ್ಶನ ನಡೆಯಲಿದೆ. ರಾತ್ರಿ ಗಂಟೆ 10.30ಕ್ಕೆ ಮಹಾಪೂಜೆ ನಂತರ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಲಿದೆ. ಜ.20ರಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಶ್ರೀ ದೇವರ ಬಲಿಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ಆಗಿ ದೇವಸ್ಥಾನಕ್ಕೆ ಬಂದು ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ನಂತರ ಉಳ್ಳಾಕುಲು, ಮೈಷಂತಾಯ ದೈವದ ಭಂಡಾರ ತೆಗೆಯುವುದು. ಜ.21 ರಂದು ಬೆಳಿಗ್ಗೆ ಗಂಟೆ 7.00ಕ್ಕೆ ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ ನಡೆಯಲಿದೆ. ನಂತರ ಪ್ರಸಾದ ವಿತರಣೆ ಪಿಲಿಭೂತದ ಭಂಡಾರ ತೆಗೆಯುವುದು, ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಲಿದೆ. ಅಪರಾಹ್ನ ಗಂಟೆ 3.00ರಿಂದ ಪಿಲಿಭೂತದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಶ್ರೀ ಕಲ್ಲುರ್ಟಿ ದೈವದ ನೇಮ ಬಳಿಕ ಪ್ರಸಾದ ವಿತರಣೆ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪೆರುವಾಜೆ ತಿಳಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading