- Thursday
- November 21st, 2024
ಬಾಳಿಲ ಗ್ರಾಮದ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಸ್ಥಾನ ಮೂರುಕಲ್ಲಡ್ಕದಲ್ಲಿ ಜ.26ರಿಂದ 'ಅಯ್ಯನಕಟ್ಟೆ ಜಾತ್ರೆ'ಯು ಆರಂಭಗೊಳ್ಳಲಿದ್ದು, ಇದರ ಪೂರ್ವಭಾವಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಾಳಿಲ ಒಕ್ಕೂಟದ ಸದಸ್ಯರಿಂದ ಜ.12ರಂದು ಶ್ರಮದಾನ ನಡೆಯಿತು. ಶ್ರಮದಾನದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಭಾಗವಹಿಸಿದ್ದರು.
ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಮಂಗಳೂರಿನವರು ಪ್ರಯಾಣಿಸುತ್ತಿದ್ದ ವ್ಯಾನ್ ದೇವರಕೊಲ್ಲಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬಂದ ಸ್ಕಾರ್ಪಿಯೋಕ್ಕೆ ಗುದ್ದಿದ ಘಟನೆ ಇಂದು ವರದಿಯಾಗಿದೆ. ಎಮ್ಮೆಮಾಡಿಗೆ ಹೋಗಿ ಮರಳಿ ಮಂಗಳೂರಿಗೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸಾರ್ವಜನಿಕರ ಸಹಾಯದಿಂದ ಹೊರ ತೆಗೆದು ಸುಳ್ಯದ ಆಸ್ಪತ್ರೆ ಗೆ ಕರೆತರಲಾಗಿದೆ. ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ...
ರಾಷ್ಟ್ರೀಯ ಯುವ ದಿನದ ಆಚರಣೆ ಜ.12 ರಂದು ಕೆವಿಜಿ ಅಮರ ಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿವೇಕಾನಂದ ಆದರ್ಶಗಳ ಸ್ಮರಣೆಯೊಂದಿಗೆ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟಿ ಡಾ. ರೇಣುಕಾ ಪ್ರಸಾದ್ ಕೆ ವಿ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರು ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಯುವ ದಿನದ ಶುಭಾಶಯ ತಿಳಿಸಿದರು....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಮರ ಪಡ್ನೂರು ಕಾರ್ಯಕ್ಷೇತ್ರದ ಮಂಜುಶ್ರೀ ಸ್ವಸಹಾಯ ಸಂಘದ ಶ್ರೀಮತಿ ರಾಜೀವಿ ಇವರು ಆಟೋರಿಕ್ಷಾ ಖರೀದಿಗಾಗಿ ಪ್ರಗತಿನಿಧಿ ಸಾಲ ಪಡೆದುಕೊಂಡು ಆಟೋರಿಕ್ಷಾ ಖರೀದಿ ಮಾಡಿದ್ದು, ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ಬಾಲಕೃಷ್ಣ ಗೌಡ ಬೊಳ್ಳೂರು ಆಟೋರಿಕ್ಷಾದ ಕೀ ಹಸ್ತಾಂತರ ಮಾಡಿದರು.ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ವೀಣಾ ಪಡ್ಪು, ಶ್ರೀ ಕ್ಷೇತ್ರ...
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಸಮಾಜ ಕಾರ್ಯ ವಿಭಾಗದ ವತಿಯಿಂದ 'ಸ್ವೆಟ್ಸ್' ಫೆಸ್ಟ್ ಅನ್ನು ಹಮ್ಮಿಕೊಳ್ಳಲಾಯಿತು. ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮುಕಾಂತರ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹೊಮ್ಮಲು ಅವಕಾಶವನ್ನು ಮಾಡಿಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರಕುಮಾರ್ ಎಂಎಂ ವಹಿಸಿ, ಮುಖ್ಯ ಅತಿಥಿಯಾಗಿ ಪ್ರೊಫೆಸರ್ ಬಾಲಚಂದ್ರ ಗೌಡ ಎಂ ಕಾಲೇಜಿನ ಶೈಕ್ಷಣಿಕ ಸಲಹೆಗಾರರು...
ಪೆರುವಾಜೆ ಡಾ.ಕೆ.ಶಿವರಾಮ ಕಾರಂತ ಸ.ಪ್ರ.ದರ್ಜೆ ಕಾಲೇಜಿನ ನೂತನ ಗ್ರಂಥಾಲಯ ಕಟ್ಟಡ ಉದ್ಘಾಟನೆ ಇಂದು ನಡೆಯಿತು. ಇದರ ಉದ್ಘಾಟನೆ ಯನ್ನು ಇಂಧನ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ...
ಇತಿಹಾಸ ಪ್ರಸಿದ್ಧ ಶ್ರೀ ಚೆನ್ನಕೇಶವ ದೇವರ ರಥೋತ್ಸವ ವಿಜೃಂಭಣೆಯಿಂದ ನಡೆಯಿತು. ವರ್ಷಂಪ್ರತಿಯಂತೆ ಜನವರಿ 11 ರಂದು ಶ್ರೀ ಚೆನ್ನಕೇಶವ ದೇವರ ರಥೋತ್ಸವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಭಕ್ತರು ಗೋವಿಂದಾ ಹರಿ ಗೋವಿಂದ ನಾಮಸ್ಮರಣೆಯೋಂದಿಗೆ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಅಲಂಕೃತ ರಥದಲ್ಲಿ ಶ್ರೀ ಚೆನ್ನಕೇಶವ ದೇವರನ್ನು ಪೀಠಾರೋಹಣರನ್ನಾಗಿಸಿ ಸಕಲಪೂಜಾ ವಿಧಿವಿಧಾನಗಳೊಂದಿಗೆ ನಡೆಯಿತು. ರಥಬೀದಿಯಾಗಿ ಸಾಗಿ ಬಂದು ಚೆನ್ನಕೇಶವ...
ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತ ಸಂಭ್ರಮ ಕಾರ್ಯಕ್ರಮವು ಜ.21 ಹಾಗೂ 22ರಂದು ಸಂಪಾಜೆ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ವಿವರ ನೀಡಿದರು. ಕಾರ್ಯಕ್ರಮದ ಅಂಗವಾಗಿ ಕಲ್ಲುಗುಂಡಿಯ ಕೂಲಿಶೆಡ್ ನಿಂದ ಶತಮಾನೋತ್ಸವ ಸಭಾಂಗಣಕ್ಕೆ ಮೆರವಣಿಗೆ ನಡೆಯಲಿದ್ದು ಸಹಕಾರಿ ರತ್ನ ಪ್ರಶಸ್ತಿ...