
ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಸಮಾಜ ಕಾರ್ಯ ವಿಭಾಗದ ವತಿಯಿಂದ ‘ಸ್ವೆಟ್ಸ್’ ಫೆಸ್ಟ್ ಅನ್ನು ಹಮ್ಮಿಕೊಳ್ಳಲಾಯಿತು. ವಿಭಾಗದ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮುಕಾಂತರ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹೊಮ್ಮಲು ಅವಕಾಶವನ್ನು ಮಾಡಿಕೊಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರುದ್ರಕುಮಾರ್ ಎಂಎಂ ವಹಿಸಿ, ಮುಖ್ಯ ಅತಿಥಿಯಾಗಿ ಪ್ರೊಫೆಸರ್ ಬಾಲಚಂದ್ರ ಗೌಡ ಎಂ ಕಾಲೇಜಿನ ಶೈಕ್ಷಣಿಕ ಸಲಹೆಗಾರರು ಹಾಗೂ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಕೃಪಾ ಎ ಯನ್ ವೇದಿಕೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಕುರಿತು ಪ್ರಸ್ತಾವಿಕ ಮಾತುಗಳನ್ನಾಡಿದರು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಉಪಸ್ಥಿತರಿದ್ದ ಗಣ್ಯರನ್ನು ಸಮಾಜಕಾರ್ಯ ಸಂಘದ ಚಾಲಕರಾದ ಶೋಭಾ ಎ ಸ್ವಾಗತಿಸಿ, ಸೋನಾಲಿ ಯಸ್ ಯನ್ ವಂದಿಸಿದರು. ಕಾರ್ಯಕ್ರಮವನ್ನು ರಮ್ಮ್ಲ ನಿಹಾ ಹಾಗು ಮೋಹೀನ ಶೇಬಿನ್ ಕಾರ್ಯಕ್ರಮವನ್ನು ನಿರೂಪಿಸಿದರು. ವಿಭಾಗದ ಎಲ್ಲಾ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗದ ಉಪನ್ಯಾಸಕರುಗಳು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.