ಮೀನುಗಾರಿಕೆ ಇಲಾಖೆ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ, ಫ್ರೀಡಂ ಆ್ಯಪ್ ಬೆಂಗಳೂರು ಇವರ ಸಹಯೋಗದೊಂದಿಗೆ ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ಆಯೋಜಿಸಿದ ಆಧುನಿಕ ಮೀನು ಕೃಷಿ ತಂತ್ರಜ್ಞಾನ ಕುರಿತು ಮಾಹಿತಿ ಕಾರ್ಯಾಗಾರ ಇಂದು ನಡೆಯಿತು. ಬಂದರು ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಕಾರ್ಯಾಗಾರ ಉದ್ಘಾಟಿಸಿದರು. ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ರಾಜ್ಯ ಮೀನುಗಾರಿಕೆ ಇಲಾಖೆಯ ನಿರ್ದೇಶಕರಾದ ರಾಮಾಚಾರ್ಯ, ಅಪರ ನಿರ್ದೇಶಕರಾದ ದಿನೇಶ ಕಳ್ಳೇರ, ಫ್ರೀಡಂ ಆ್ಯಪ್ ನ ಸಂಸ್ಥಾಪಕರಾದ ಸುಧೀರ್ ಸಿ.ಎ., ಮಂಗಳೂರು ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಹರೀಶ್ ಕುಮಾರ್, ಜಿಲ್ಲಾ ನಿರ್ದೇಶಕರಾದ ಸುಶ್ಮಿತಾ ರಾವ್, ಪುತ್ತೂರು ಮತ್ತು ರೈತ ಉತ್ಪಾದಕ ಕಂಪೆನಿ ಅಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಸಂಪನ್ಮೂಲ ವ್ಯಕ್ತಿಗಳಾದ ಶಿವಕುಮಾರ್ ಮಗಧ, ಡಾ.ಚೇತನ್ ಉಪಸ್ಥಿತರಿದ್ದರು.
- Friday
- November 1st, 2024