
ಮುಂಬರುವ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷರಾಗಿ ಭರತ್ ಮುಂಡೋಡಿಯವರನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ನೇಮಕಗೊಳಿಸಿದ್ದಾರೆ. ಸಂಘಟನಾ ಚತುರ, ಉತ್ತಮ ವಾಗ್ಮಿಯಾಗಿರುವ ಇವರು ಮಾಜಿ.ಜಿಂ.ಪಂ.ಸದಸ್ಯರಾಗಿ ಹಾಗೂ ಪಕ್ಷ ಸಂಘಟನೆಗಾಗಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದು ಅವಕಾಶ ದೊರೆಯುವ ಸಾಧ್ಯತೆ ಹೆಚ್ಚಿದೆ.