ಕುಕ್ಕೆ ಸುಬ್ರಹ್ಮಣ್ಯದ ಪೊಲೀಸ್ ಠಾಣೆಯ ನೂತನ ಕಟ್ಟಡಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಸುಮಾರು 1.23 ಕೋಟಿ ರೂ ವೆಚ್ಚದಲ್ಲಿ ನೂತನ ಕಟ್ಟಡ ನಿರ್ಮಾಣವಾಗಲಿದೆ.
ಈ ಸಂದರ್ಭದಲ್ಲಿ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಕೇಂದ್ರೀಯ ರಬ್ಬರ್ ಮಂಡಳಿಯ ಸದಸ್ಯರಾದ ಮುಳಿಯ ಕೇಶವ ಭಟ್, ಕೇಂದ್ರೀಯ ರೈಲ್ವೇ ಸಲಹಾ ಸಮಿತಿಯ ಸದಸ್ಯರಾದ ವೆಂಕಟ್ ದಂಬೆಕೋಡಿ, ಪ್ರಮುಖರಾದ ವೆಂಕಟ್ ವಳಲಂಬೆ, ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯರಾದ ರಾಜೇಶ್ ಎನ್.ಎಸ್. ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷಿ ಭಗವಾನ್ ಸೋಣಾವಣೆ, ಪುತ್ತೂರು ಉಪವಿಭಾಗದ ಡಿ.ವೈ.ಎಸ್.ಪಿ. ಡಾ.ವೀರಯ್ಯ ಹಿರೇಮಠ್, ಸುಳ್ಯ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಬ್ರಹ್ಮಣ್ಯ ಪೊಲೀಸ್ ಠಾಣಾಧಿಕಾರಿ ಮಂಜುನಾಥ್, ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲ ಸೌಲಭ್ಯ ನಿಗಮ ನಿಯಮಿತದ ಮುಖ್ಯ ಇಂಜಿನಿಯರ್ ಸಣ್ಣೇಗೌಡ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.