



ಸುಮಾರು ರೂ.2.00 ಕೋಟಿ ಅನುದಾನದಲ್ಲಿ ನಿರ್ಮಾಣಗೊಂಡ ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ನೂತನ ಕೊಠಡಿಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಜ.18 ರಂದು ಉದ್ಘಾಟಿಸಿದರು. ಮೀನುಗಾರಿಕಾ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ.ತೀರ್ಥರಾಮ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಚನಿಲ ತಿಮ್ಮಪ್ಪ ಶೆಟ್ಟಿ, ಮಾಜಿ ವಿಧಾನಪರಿಷತ್ ಸದಸ್ಯರಾದ ಅಣ್ಣಾ ವಿನಯಚಂದ್ರ, ಬೆಳ್ಳಾರೆ ಗ್ರಾ.ಪಂ.ಅಧ್ಯಕ್ಷರಾದ ಚಂದ್ರಶೇಖರ ಪನ್ನೆ, ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಶ್ರೀನಾಥ್ ಬಾಳಿಲ, ದ.ಕ.ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಧಾಕರ್, ದ.ಕ. ಜಿಲ್ಲಾ ಪದವಿ ಪೂರ್ವ ಕಾಲೇಜು ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಯಣ್ಣ, ಸುಳ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ವೀಣಾ, ಸುಳ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಪರಮೇಶ್ವರ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು. ಸಚಿವ ಎಸ್.ಅಂಗಾರ, ಎ.ವಿ.ತೀರ್ಥರಾಮ ಅವರನ್ನು ಸನ್ಮಾನಿಸಲಾಯಿತು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಸುಧಾಕರ.ಕೆ ಸ್ವಾಗತಿಸಿದರು.ಬೆಳ್ಳಾರೆ ಕೆಪಿಎಸ್ ಉಪ ಪ್ರಾಂಶುಪಾಲರಾದ ಉಮಾಕುಮಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ವೀಣಾ ಎಂ.ಟಿ.ವಂದಿಸಿದರು.ದಿನೇಶ್ ಹಾಗು ಸವಿತಾ ಕಾರ್ಯಕ್ರಮ ನಿರೂಪಿಸಿದರು.