
ಕೊಲ್ಲಮೊಗ್ರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಮೊಗ್ರ ಮತ್ತು ಕಲ್ಮಕಾರು ಗ್ರಾಮದ 2022-23ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಜ. 20ನೇ ಶುಕ್ರವಾರ ಪೂ.ಗಂಟೆ 10.30ಕ್ಕೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ. ಸಭೆಯ ಉಸ್ತುವಾರಿ ಅಧಿಕಾರಿಗಳಾಗಿ ವಲಯ ಅರಣ್ಯಾಧಿಕಾರಿ ಸಾಮಾಜಿಕ ಅರಣ್ಯ ಇಲಾಖೆ ಸುಳ್ಯ ಇವರು ಭಾಗವಹಿಸಲಿದ್ದಾರೆ. ಗ್ರಾಮ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಭಾಗವಹಿಸಿ ಗ್ರಾಮಾಭಿವೃದ್ಧಿಯ ಬಗ್ಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಸಹಕರಿಸಬೇಕೆಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿಚಂದ್ರ ಎ. ತಿಳಿಸಿದ್ದಾರೆ.