ಅತ್ಯಂತ ಕಾರಣೀಕವಾದ, ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ “ಅಯ್ಯನಕಟ್ಟೆ ಜಾತ್ರೆ” ಜ.26 ಗುರುವಾರದಿಂದ ಜ.29 ಆದಿತ್ಯವಾರದವರೆಗೆ ಜರುಗಲಿದೆ. ಜ.20ರಂದು ಬೆಳಗ್ಗೆ ಗಂಟೆ 11.30ಕ್ಕೆ ಉಗ್ರಾಣ ಮುಹೂರ್ತ ಹಾಗೂ ಗೊನೆ ಕಡಿಯುವ ಕಾರ್ಯಕ್ರಮ ನಡೆಯಲಿದೆ.
ಜಾತ್ರೋತ್ಸವದ ಅಂಗವಾಗಿ ಜ.26ರಂದು ಬೆಳಗ್ಗೆ 9.30ರಿಂದ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸಾನ್ನಿಧ್ಯದಲ್ಲಿ ಗಣಪತಿ ಹವನ, ವಿಶೇಷ ತಂಬಿಲ ಸೇವೆ, ನಾಗತಂಬಿಲ ನಡೆಯಲಿದೆ.
ಬೆಳಗ್ಗೆ 11.00ರಿಂದ ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ನಾಗತಂಬಿಲ, ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 5.00ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ದೈವಸ್ಥಾನದವರೆಗೆ ಹಸಿರುವಾಣಿ ಮೆರವಣಿಗೆ ಜರುಗಲಿದೆ.
ಜ.27ರಂದು ಮೂರುಕಲ್ಲಡ್ಕದಲ್ಲಿ ಬೆಳಗ್ಗೆ 8.30ರಿಂದ ಮಹಾಗಣಪತಿ ಹವನ ಸಹಿತ ಚಂಡಿಕಾ ಹವನ ಮತ್ತು ದುರ್ಗಾಪೂಜೆ, ಶ್ರೀ ದೈವಗಳಿಗೆ ವಿಶೇಷ ತಂಬಿಲ ಸೇವೆ, ಸಾಮೂಹಿಕ ಪ್ರಾರ್ಥನೆ, ಪ್ರಸಾದ ವಿತರಣೆ, ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನೆರವೇರಲಿದೆ. ಸಂಜೆ 6.30ರಿಂದ ಕುಕ್ಕುತ್ತಡಿಯ ಶ್ರೀ ದೈವಗಳ ಬಚ್ಚೆಲ್ ಕಟ್ಟೆಯಲ್ಲಿ ತಂಬಿಲ ಸೇವೆ, ಸಂಜೆ ಗಂಟೆ 6.45ರಿಂದ ಮೂರುಕಲ್ಲಡ್ಕದಲ್ಲಿ ಪುಳ್ಕೂರು ಶ್ರೀ ಮಹಾದೇವ ಭಜನಾ ಮಂಡಳಿ, ಸಿರಿಬಾಗಿಲು ಕಾಸರಗೋಡು ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿರುವುದು. ರಾತ್ರಿ ಗಂಟೆ 7.30ಕ್ಕೆ ಶ್ರೀ ಇಷ್ಟದೇವತಾ ಉಳ್ಳಾಕುಲು ದೈವಕ್ಕೆ ಎಣ್ಣೆ ಬೂಳ್ಯ ನೀಡುವ ಕಾರ್ಯಕ್ರಮ ನಡೆಯಲಿದೆ. ಜ.28ರಂದು ಬೆಳಗ್ಗೆ ಗಂಟೆ 5.30ಕ್ಕೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಡುವುದು, ಬೆಳಗ್ಗೆ ಗಂಟೆ 7.00ರಿಂದ ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ ಏರುವುದು, ನರ್ತನ ಸೇವೆ, ಬಟ್ಟಲು ಕಾಣಿಕೆ, ಸಿರಿಮುಡಿ ಗಂಧಪ್ರಸಾದ ವಿತರಣೆ, ಕೊಡಮಣಿತ್ತಾಯ, ಕೊಲ್ಲಿಕುಮಾರ, ಪುರುಷ ದೈವ, ಮೈಸಂತಾಯ ದೈವಗಳ ಕಟ್ಟುಕಟ್ಟಳೆಯ ನೇಮ, ಬೂಳ್ಯ ವಿತರಣೆ ನಡೆಯಲಿರುವುದು. ಬೆಳಗ್ಗೆ ಗಂಟೆ 8.00ರಿಂದ ಉಪಾಹಾರ, ಬೆಳಗ್ಗೆ ಗಂಟೆ 11.30ರಿಂದ ರುದ್ರಚಾಮುಂಡಿ ದೈವದ ನರ್ತನ ಸೇವೆ, ಬೂಳ್ಯ ವಿತರಣೆ ನಡೆದು ಮಧ್ಯಾಹ್ನ 1.00ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 6.00-7.00 ಮೂರುಕಲ್ಲಡ್ಕದಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ಧರ್ಮದರ್ಶಿಗಳಾದ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಅಧ್ಯಕ್ಷತೆ ವಹಿಸಲಿದ್ದಾರೆ. ವಿಶ್ವಹಿಂದೂ ಪರಿಷತ್, ಮಂಗಳೂರು ವಿಭಾಗದ ಕಾರ್ಯದರ್ಶಿಯಾದ ಸಾಣೂರುಗುತ್ತು ಶ್ರೀ ದೇವಿಪ್ರಸಾದ್ ಶೆಟ್ಟಿ ಮುಖ್ಯ ಭಾಷಣಗೈಯಲಿದ್ದಾರೆ. ಕಾರ್ಯಕ್ರಮದ ಅತಿಥಿ ಅಭ್ಯಾಗತರಾಗಿ ಎಕ್ಸೆಲ್ ವಿದ್ಯಾಸಂಸ್ಥೆಗಳು, ಗುರುವಾಯನಕೆರೆ, ಬೆಳ್ತಂಗಡಿ ಇಲ್ಲಿನ ಆಡಳಿತ ಮಂಡಳಿ ಅಧ್ಯಕ್ಷರಾದ ಶ್ರೀ ಸುಮಂತ್ ಜೈನ್, ಬೆಳ್ಳಾರೆ ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಶ್ರೀ ಎಂ ಪಿ ಉಮೇಶ್, ಶ್ರೀ ಪುರಂದರ ಗೌಡ ಸಪ್ತಗಿರಿ, ಕಳಂಜ ಭಾಗವಹಿಸಲಿದ್ದಾರೆ. ಸಂಜೆ ಗಂಟೆ 7-00ರ ನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ಭಸ್ಮಾಸುರ ಮೋಹಿನಿ ಯಕ್ಷಗಾನ ಬಯಲಾಟ ನಡೆಯಲಿರುವುದು. ರಾತ್ರಿ ಗಂಟೆ 9-00ರಿಂದ ಅನ್ನ ಸಂತರ್ಪಣೆ ನಡೆಯಲಿದೆ. ಜ.29ರಂದು ಬೆಳಗ್ಗೆ 7.30ಕ್ಕೆ ತಂಟೆಪ್ಪಾಡಿಯಿಂದ ಶಿರಾಡಿ ದೈವದ ಭಂಡಾರ ಹೊರಡುವುದು, ಬೆಳಗ್ಗೆ 8.00ಕ್ಕೆ ಕಳಂಜ ಗುತ್ತಿನಿಂದ ಧೂಮಾವತಿ ದೈವದ ಭಂಡಾರ ಹೊರಡುವುದು, ಬೆಳಗ್ಗೆ 8.00ಕ್ಕೆ ಮೂರುಕಲ್ಲಡ್ಕ ದೈವಸ್ಥಾನದಿಂದ ಕೊಡಮಣಿತ್ತಾಯ ದೈವದ ಭಂಡಾರ ಹೊರಡಲಿದೆ. ಬಳಿಕ ಬೆಳಗ್ಗೆ 10.30ಕ್ಕೆ ಕಲ್ಲಮಾಡದ ಬಳಿಕೊಡಮಣಿತ್ತಾಯ, ಧೂಮಾವತಿ ಹಾಗೂ ಶಿರಾಡಿ ದೈವಗಳ ನರ್ತನ ಸೇವೆ, ಬೂಳ್ಯ ವಿತರಣೆ ನಡೆಯಲಿದೆ. ಮಧ್ಯಾಹ್ನ 1.00ರಿಂದ ಅನ್ನಸಂತರ್ಪಣೆ ನಡೆಯಲಿರುವುದು. ಅಪರಾಹ್ನ ಗಂಟೆ 2.30ರಿಂದ ಕಲ್ಲಮಾಡದ ಬಳಿ ಶಿರಾಡಿ ದೈವದ ದೊಂಪದ ಬಲಿ ನೇಮೋತ್ಸವ, ಬೂಳ್ಯ ವಿತರಣೆ ನಡೆಯಲಿದೆ. ಬಳಿಕ ಸಂಜೆ 4.30ರಿಂದ ಕಲ್ಲಮಾಡದಿಂದ ತಂಬಿನಮಕ್ಕಿವರೆಗೆ ಮಾರಿ ಹೊರಡಲಿರುವುದು. ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಗವದ್ಭಕ್ತರು ಭಾಗಿಗಳಾಗಿ ಶ್ರೀ ದೈವಗಳ ಕೃಪೆಗೆ ಪಾತ್ರರಾಗುವಂತೆ ವಿನಂತಿಸಲಾಗಿದೆ.
- Saturday
- November 23rd, 2024