ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿಷ್ಠಾ ಕಲಶ ಹಾಗೂ ವಾರ್ಷಿಕ ಜಾತ್ರಾ ಮಹೋತ್ಸವವು ಜ.15ರಿಂದ ಜ.21ರ ವರೆಗೆ ವಿಜೃಂಭಣೆಯಿಂದ ನಡೆಯಿತು. ಜ.15 ರಂದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಸ್ವಸ್ತಿ ಪುಣ್ಯಾಹವಾಚನ, ಸ್ಥಳಶುದ್ದಿ, ಪ್ರಾಸಾದ ಶುದ್ದಿ , ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ನೂತನ ಬಿಂಬ ಜಲಾಧಿವಾಸ, ಪ್ರಸಾದ ವಿತರಣೆ ನಡೆಯಿತು. ಜ.16 ರಂದು ಬೆಳಿಗ್ಗೆ ಗಂಟೆ 9-10 ರಿಂದ 9-45 ರ ಕುಂಭ ಲಗ್ನದಲ್ಲಿ ಶ್ರೀ ಕಲ್ಲುರ್ಟಿ ಮತ್ತು ಕಲ್ಕುಡ ದೈವದ ಪ್ರತಿಷ್ಠೆ ನೆರವೇರಿತು. ತದನಂತರ ಸಾನ್ನಿಧ್ಯ ಕಲಶಾಭಿಷೇಕ, ತಂಬಿಲ ಸೇವೆ, ಮಂಗಳಾರತಿ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಬೆಳಿಗ್ಗೆ ಉಗ್ರಾಣ ಮುಹೂರ್ತ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಗಂಟೆ 7.00ಕ್ಕೆ ದೇವತಾ ಪ್ರಾರ್ಥನೆ, ಧ್ವಜಾರೋಹಣ ನಡೆಯಿತು. ನಂತರ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಜ.17 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತ ಕಟ್ಟೆ ಪೂಜೆ, ಅನ್ನಸಂತರ್ಪಣೆ ನಡೆಯಿತು. ಜ.18 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ,ದೀಪೋತ್ಸವ, ವಸಂತ ಕಟ್ಟೆ ಪೂಜೆ ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರ ಸಾರಥ್ಯದ ಪಾವಂಜೆ ಮೇಳದವರಿಂದ ಬಪ್ಪನಾಡು ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ ನಡೆಯಿತು. ಜ.19 ರಂದು ಬೆಳಿಗ್ಗೆ ಶ್ರೀ ದೇವರ ಬಲಿ ಹೊರಟು ಉತ್ಸವ, ಮಧ್ಯಾಹ್ನ ಶ್ರೀ ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ, ವಸಂತಕಟ್ಟೆ ಪೂಜೆ, ಸವಾರಿ ಹೋಗಿ ಬಂದು ಬೆಡಿಕಟ್ಟೆಯಲ್ಲಿ ಸಿಡಿಮದ್ದು ಪ್ರದರ್ಶನ ನಡೆಯಿತು. ರಾತ್ರಿ ಮಹಾಪೂಜೆ ನಂತರ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಉತ್ಸವ, ಶಯನೋತ್ಸವ, ಕವಾಟ ಬಂಧನ, ಅನ್ನಸಂತರ್ಪಣೆ ನಡೆಯಿತು. ಜ.20ರಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ ಪ್ರಸಾದ ವಿತರಣೆ ನಡೆಯಿತು. ಮಧ್ಯಾಹ್ನ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಶ್ರೀ ದೇವರ ಬಲಿಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ಆಗಿ ದೇವಸ್ಥಾನಕ್ಕೆ ಬಂದು ಧ್ವಜಾವರೋಹಣ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ನಂತರ ಉಳ್ಳಾಕುಲು, ಮೈಷಂತಾಯ ದೈವದ ಭಂಡಾರ ತೆಗೆಯಲಾಯಿತು. ಜ.21 ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ಪಂಚವಿಂಶತಿ ಕಲಶ ಪೂಜೆ, ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ ನಡೆಯಿತು. ನಂತರ ಪ್ರಸಾದ ವಿತರಣೆ ಪಿಲಿಭೂತದ ಭಂಡಾರ ತೆಗೆಯುವುದು, ಮಧ್ಯಾಹ್ನ ಶ್ರೀ ದೇವರಿಗೆ ಸಂಪ್ರೋಕ್ಷಣೆ, ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಮಹಾಅನ್ನಸಂತರ್ಪಣೆ ನಡೆಯಿತು. ಅಪರಾಹ್ನ ಪಿಲಿಭೂತದ ನೇಮೋತ್ಸವ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ರಾತ್ರಿ ಶ್ರೀ ಕಲ್ಲುರ್ಟಿ ಕಲ್ಕುಡ ದೈವದ ನೇಮ ಬಳಿಕ ಪ್ರಸಾದ ವಿತರಣೆ ನಡೆಯುವುದರೊಂದಿಗೆ ಜಾತ್ರೋತ್ಸವ ಸಂಪನ್ನಗೊಂಡಿತು. ದೇವಸ್ಥಾನದ ಪವಿತ್ರವಾಣಿ ಸುಬ್ರಹ್ಮಣ್ಯ ನಿಡ್ವಣ್ಣಾಯ ಕುಮಾರಮಂಗಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ. ಪದ್ಮನಾಭ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್, ಪಿ.ವೆಂಕಟಕೃಷ್ಣರಾವ್ ಜಯಪ್ರಕಾಶ್ ರೈ ಬಿ, ಪಿ.ಜಗನ್ನಾಥ ರೈ, ದಾಮೋದರ ನಾಯ್ಕ, ನಾರಾಯಣ ಕೆ, ಶ್ರೀಮತಿ ಭಾಗ್ಯಲಕ್ಷ್ಮಿ, ಶ್ರೀಮತಿ ಯಶೋಧ ಎ.ಎಸ್, ಸಿಬ್ಬಂದಿ ವಸಂತ ಪೆರುವಾಜೆ ಹಾಗೂ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.