Ad Widget

ಸುಳ್ಯ : ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಸಚಿವ ಅಂಗಾರರಿಂದ ಚಾಲನೆ

. . . . . . . . .

ಬಿಜೆಪಿ ವಿಜಯ ಸಂಕಲ್ಪ ಅಭಿಯಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಳ್ಯ ನಗರದಲ್ಲಿ ಇಂದು ಚಾಲನೆ ನೀಡಲಾಯಿತು. ಕ್ಷೇತ್ರದ ಶಾಸಕರು ಸಚಿವರಾದ ಶ್ರೀ ಎಸ್ ಅಂಗಾರ ಅವರು ಧ್ವಜ ಹಸ್ತಾಂತರ ಮತ್ತು ಕರಪತ್ರ ವಿತರಣೆ ಮೂಲಕ ಈ ಅಭಿಯಾನಕ್ಕೆ ಚಾಲನೆ ನೀಡಿದರು.
ಜನವರಿ 21ರಿಂದ 29 ರವರೆಗೆ ಕ್ಷೇತ್ರದ 231 ಬೂತ್ ಗಳ ಎಲ್ಲಾ ಮನೆಯನ್ನು ಸಂಪರ್ಕ ಮಾಡುವ ಮೂಲಕ ಕೇಂದ್ರ, ರಾಜ್ಯ ಸರ್ಕಾರದ ಸಾಧನೆಗಳನ್ನು ತಿಳಿಸುವುದು, ಬಿಜೆಪಿ ಸದಸ್ಯತ್ವ ಅಭಿಯಾನ, ಫಲಾನುಭವಿಗಳ ಭೇಟಿ, ಸ್ಟಿಕ್ಕರ್ ವಿತರಣೆ, ಗೋಡೆ ಬರಹ, ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಆಲಿಸುವ ಕಾರ್ಯಕ್ರಮಗಳು ಈ ಅಭಿಯಾನದಲ್ಲಿ ನಡೆಯಲಿದೆ.
ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾತ್ಮಕ ಕಾರ್ಯವಾಗಿ ಈ ಅಭಿಯಾನವನ್ನು ನಡೆಸುತ್ತಿದೆ. ಅಭಿಯಾನಕ್ಕೆ ಚಾಲನೆ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಹರೀಶ್ ಕಂಜಿಪಿಲಿ , ಮೀನುಗಾರಿಕಾ ನಿಗಮ ಅಧ್ಯಕ್ಷ ಎ ವಿ ತೀರ್ಥರಾಮ , ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಸುಳ್ಯ ಮಂಡಲದ ಪ್ರ.ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಭಾಗೀರಥಿ ಮುರುಳ್ಯ, ಸುರೇಶ್ ಕಣೆಮರಡ್ಕ, ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ನಗರ ಪಂಚಾಯತ್ ಸದಸ್ಯರುಗಳು ಪಕ್ಷದ ವಿವಿಧ ಜವಾಬ್ದಾರಿಯ ಪ್ರಮುಖರು, ಜನಪ್ರತಿನಿಧಿಗಳು ಸೇರಿದಂತೆ ಸುಮಾರು 150 ಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಬಿಜೆಪಿ ಕಚೇರಿ ಬಳಿಯಿಂದ ಪ್ರಾರಂಭವಾದ ಅಭಿಯಾನ ಸುಳ್ಯ ಪೇಟೆಯಲ್ಲಿ ಸಾಗಿ ಸುಳ್ಯ ಕೆ ಎಸ್ ಆರ್ ಟಿ ಸಿ ಬಸ್ ತಂಗುದಾಣದವರೆಗೆ ಜಾಥಾ ಮೂಲಕ ನಡೆಯಿತು, ಕರಪತ್ರ ವಿತರಣೆ, ಸದಸ್ಯತ್ವ ನೋಂದಣಿ ಕಾರ್ಯಕ್ರಮ ನಡೆಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading