Ad Widget

ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ


ಅಂತಾರಾಷ್ಟ್ರೀಯ ಖ್ಯಾತಿಯ ಜಗದ್ವಿಖ್ಯಾತ ಹಂಪಿ ಉತ್ಸವದ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಸುಳ್ಯದ ಲೇಖಕಿ, ಕವಯಿತ್ರಿ ಡಾ. ಅನುರಾಧಾ ಕುರುಂಜಿ ಯವರು ಆಯ್ಕೆಯಾಗಿದ್ದಾರೆ. ಹಿಂದಿನ ವಿಜಯನಗರ ಸಾಮ್ರಾಜ್ಯದ ಭವ್ಯತೆಯನ್ನು ಮರುಸೃಷ್ಟಿಸುವ ಸಲುವಾಗಿ ರಾಜ್ಯ ಸರ್ಕಾರವು ಹಂಪಿ ಉತ್ಸವವನ್ನು ಆರಂಭಿಸಿದ್ದು, 2023ರ ಹಂಪಿ ಉತ್ಸವವು ಜನವರಿ 27ರಿಂದ 29 ರವರೆಗೆ ಐತಿಹಾಸಿಕ ಪ್ರವಾಸಿ ತಾಣ ಹಂಪಿಯಲ್ಲಿ ನಡೆಯಲಿದ್ದು, ಉತ್ಸವದ ಪ್ರಯುಕ್ತ ನಡೆಯಲಿರುವ ಕವಿಗೋಷ್ಠಿಯಲ್ಲಿ‌ ಡಾ. ಅನುರಾಧಾ ಕುರುಂಜಿಯವರು ಕವನ ವಾಚಿಸಲಿದ್ದಾರೆ. ಈಗಾಗಲೇ ರಾಜ್ಯಮಟ್ಟದ ಚುಟುಕು ಕವಿಗೋಷ್ಠಿ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕವಿಗೋಷ್ಠಿ, ಕಾಸರಗೋಡು ಜಿಲ್ಲಾ ಹಾಗೂ
ಕೇರಳ ರಾಜ್ಯ ಮಟ್ಟದ ಕವಿಗೋಷ್ಠಿಗಳಲ್ಲಿ ಕವನ ವಾಚಿಸಿರುವ ಇವರು ಕುರುಂಜಿ ಪದ್ಮಯಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ, ಕೆವಿಜಿ ಪಾಲಿಟೆಕ್ನಿಕ್ ನ ಶಿಕ್ಷಕ ಚಂದ್ರಶೇಖರ ಬಿಳಿನೆಲೆಯವರ ಪತ್ನಿ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading