ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾರ್ಗದರ್ಶನದಲ್ಲಿ ರಾಷ್ಟ್ರೀಯ ಮತದಾರರ ದಿನ-2023ನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆಚರಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲರಾದ ಪ್ರೊ. ಡಾ. ಲೀಲಾಧರ್ ಡಿ. ವಿ., ಯವರು ಪ್ರತಿಜ್ಞಾವಿಧಿ ಬೋಧಿಸಿ, ಮತದಾನದ ಮಹತ್ವದ ಬಗ್ಗೆ ತಿಳಿಸಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು, ಸಂಸ್ಥೆಯ ಎನ್.ಎಸ್. ಎಸ್ ಘಟಕದ ಯೋಜನಾಧಿಕಾರಿಗಳು, ಎನ್.ಎಸ್. ಎಸ್ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಸಂಸ್ಥೆಯ ಎಲ್ಲಾ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದು ಪ್ರತಿಜ್ಞಾವಿಧಿ ಸ್ವೀಕರಿಸಿದರು.
- Friday
- November 1st, 2024