





ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ ಸಚಿವ ಹಾಗೂ ದ.ಕ.ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.