- Thursday
- November 21st, 2024
ಪ್ರತಿಷ್ಠಿತ ಪತಂಜಲಿ ಯೋಗ ತರಬೇತಿ ಕೇಂದ್ರ ಬೆಂಗಳೂರು ಇವರು ನಡೆಸಿದ ಯೋಗೋತ್ಸವ 2022 ಇದರಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಯೋಗ ಕಲಾನಿಧಿ ಪ್ರಶಸ್ತಿಗೆ ಆಯ್ಕೆ ಆಗಿದ್ದು ಪತಂಜಲಿ ಯೋಗ ತರಬೇತಿ ಕೇಂದ್ರದ ವತಿಯಿಂದ ನೀಡಿದ ಪ್ರಶಸ್ತಿ ಪತ್ರ ಮತ್ತು ಶಾಶ್ವತ ಫಲಕವನ್ನು ಅಮರ ಯೋಗ ತರಬೇತಿ ಕೇಂದ್ರ ಗುತ್ತಿಗಾರು ಇಲ್ಲಿ ಹಸ್ತಾಂತರ ಮಾಡಲಾಯಿತು . ಈ...
ಗುತ್ತಿಗಾರು ಗ್ರಾಮದ ಮಣಿಯಾನ ಮನೆ ಗೋಳ್ಯಡ್ಕ ರುಕ್ಮಿಣಿ ಅಲ್ಪಕಾಲದ ಅಸೌಖ್ಯದಿಂದ ಇಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ವಾಸುದೇವ, ಸೀತಾರಾಮ, ಪುತ್ರಿ, ಅಳಿಯ, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.
ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ವಾರ್ಷಿಕ ಜಾತ್ರಾ ಮಹೋತ್ಸವ ಫೆ.11ರಿಂದ ಫೆ.14ರ ವರೆಗೆ ಜರಗಲಿದ್ದು, ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜ.27ರಂದು ನಡೆಯಿತು. ದೇವಸ್ಥಾನದ ಆಡಳಿತ ಧರ್ಮದರ್ಶಿ ಹೆಗ್ಗಡೆ ಶ್ರೀ ಪರಮೇಶ್ವರಯ್ಯ ಕಾಂಚೋಡು ಸೇರಿದಂತೆ ಆಡಳಿತ ಮಂಡಳಿ ಸದಸ್ಯರು, ಜಾತ್ರೋತ್ಸವ ಸಮಿತಿ ಸಂಚಾಲಕರು, ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಭಾರತೀಯ ಜನತಾ ಪಾರ್ಟಿ ವತಿಯಿಂದ ಕಾಣಿಯೂರು ಪೇಟೆಯಲ್ಲಿ ವಿಜಯ ಸಂಕಲ್ಪ ಅಭಿಯಾನ ನಡೆಯಿತು. ಅಭಿಯಾನಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಮುಖ ನಾಯಕರುಗಳಾದ ಕೃಷ್ಣ ಶೆಟ್ಟಿ ಕಡಬ, ಗಣೇಶ್ ಉದ್ದನಡ್ಕ , ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡಿಂಜಿ, ಧನಂಜಯ ಕೇನಜೆ ಮತ್ತಿತರರು ಉಪಸ್ಥಿತರಿದ್ದರು.
ದೇವಚಳ್ಳ ಗ್ರಾಮದ ಅಡ್ಡನಪಾರೆ ಪರಮೇಶ್ವರ ಅವರ ಪುತ್ರಿ ನವ್ಯಲತಾ ಳ ವಿವಾಹ ನಿಶ್ಚಿತಾರ್ಥವು ಬೆಳ್ತಂಗಡಿ ತಾಲೂಕು ಶಿಶಿಲ ಗ್ರಾಮದ ಎಳ್ಳುಮಜಲು ದಿ. ವೆಂಕಪ್ಪರವರ ಪುತ್ರ ಜಗದೀಶರವರೊಂದಿಗೆ ಜ. 28 ದಂದು ವಧುವಿನ ಮನೆಯಲ್ಲಿ ನೆರವೇರಿತು.
ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ಮೂರು ದಿನಗಳ ಜಗದ್ವಿಖ್ಯಾತ ಹಂಪಿ ಉತ್ಸವದ ವಿರುಪಾಕ್ಷೇಶ್ಬರ ವೇದಿಕೆಯಲ್ಲಿ ಜನವರಿ 28 ರಂದು ನಡೆದ ಕವಿಗೋಷ್ಠಿಯಲ್ಲಿ ಸುಳ್ಯದ ಸಾಹಿತಿ ಡಾ.ಅನುರಾಧಾ ಕುರುಂಜಿಯವರು ಕವನ ವಾಚಿಸಿದರು.ಹಂಪಿ ಕನ್ನಡ ವಿಶ್ವ ವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿಯವರು ಉದ್ಘಾಟಿಸಿದ ಕವಿ ಗೋಷ್ಠಿಯ ಅಧ್ಯಕ್ಷತೆಯನ್ನುಸಾಹಿತಿ ಡಾ. ಹೆಚ್ ಟಿ ಪೋತೆ ವಹಿಸಿದ್ದರು....