
ಅರಂತೋಡು ಗ್ರಾಮ ಪಂಚಾಯಿತ್ ವತಿಯಿಂದ ಪ್ರತಿ ತಿಂಗಳ ಕೊನೆಯ ಭಾನುವಾರ ರಾಷ್ಟ್ರೀಯ ಹೆದ್ದಾರಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಅದರಂತೆ ಜ.29 ರಂದು ಅಭಿಯಾನ ನಡೆಯಿತು. ಈ ಸ್ವಚ್ಛತಾ ಅಭಿಯಾನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ಪ್ರಕೃತಿ ವಿಕೋಪ ನಿರ್ವಹಣೆ ತಂಡ, ಯುವ ಬ್ರಿಗೇಡ್ ಅರಂತೋಡು ಮತ್ತು ನೆಹರು ಮೆಮೋರಿಯಲ್ ಕಾಲೇಜಿನ ಬಿ ಎಸ್ ಡಬ್ಲ್ಯೂ ವಿದ್ಯಾರ್ಥಿಗಳು, ಅರಂತೋಡು ಘನ ಮತ್ತು ದ್ರವ ಸಂಪನ್ಮೂಲ ನಿರ್ವಹಣಾ ಸಂಘ ಸ್ವಚ್ಛತಾ ಸಮಿತಿಯ ಸದಸ್ಯರು, ಗ್ರಾಮ ಪಂಚಾಯಿತಿ ಸದಸ್ಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು. ಗ್ರಾಮ ಪಂಚಾಯತ್ ವತಿಯಿಂದ ಉಪಹಾರದ ವ್ಯವಸ್ಥೆ ಮಾಡಲಾಯಿತು.