- Thursday
- November 21st, 2024
ಸುಳ್ಯ ಕಡೆಗೆ ಬರುತ್ತಿದ್ದ ರಾಜಹಂಸ ಬಸ್ ಹಾಗೂ ಸುಳ್ಯದಿಂದ ಹೋಗುತ್ತಿದ್ದ ಅಂಬ್ಯುಲೆನ್ಸ್ ಮಧ್ಯೆ ಇಂದು ಸಂಜೆ ಅಪಘಾತ ಸಂಭವಿಸಿದ ಘಟನೆ ಪಾಲಡ್ಕದಿಂದ ವರದಿಯಾಗಿದೆ. ರೋಗಿಯೊಬ್ಬರನ್ನು ಸುಳ್ಯದಿಂದ ಬೆಳ್ಳಾರೆಗೆ ಕೊಂಡೊಯ್ಯಲಾಗುತ್ತಿದ್ದು, ಅಂಬ್ಯುಲೆನ್ಸ್ ನಲ್ಲಿ ಕುಳಿತಿದ್ದ ಸ್ವಸ್ತಿಕ್ ಎಂಬ ಯುವಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರೋಗಿಯನ್ನು ಬೇರೆ ಅಂಬ್ಯುಲೆನ್ಸ್ ನಲ್ಲಿ ಬೆಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದುಬಂದಿದೆ.
ಹರಿಹರ ಪಲ್ಲತ್ತಡ್ಕದ ಶ್ರೀ ಹರಿಹರೇಶ್ವರ ದೇವಸ್ಥಾನದ ವಠಾರದಲ್ಲಿ ಜ.28 ರಂದು ರಥ ಸಪ್ತಮಿಯ ಪ್ರಯುಕ್ತ 108 ಸಾಮೂಹಿಕ ಸೂರ್ಯ ನಮಸ್ಕಾರ ನಡೆಯಿತು.ಈ ಸಂದರ್ಭದಲ್ಲಿ ಯೋಗ ಶಿಕ್ಷಕರಾದ ಕೃಷ್ಣಪ್ರಸನ್ನ ಹಾಗೂ ಯೋಗಾಸಕ್ತರು ಉಪಸ್ಥಿತರಿದ್ದರು.
ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಜ. ೩೧ರಿಂದ ಫೆ. ೯ರವರೆಗೆ ಬ್ರಹ್ಮಕಲಶೋತ್ಸವ ಹಾಗೂ ಜಾತೋತ್ಸವ ನಡೆಯಲಿದ್ದು, ಆ ಪ್ರಯುಕ್ತ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗಡೆಯವರು ರೂ. ೫ ಲಕ್ಷ ಧನಸಹಾಯ ನೀಡಿದರು.ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೃಷ್ಣ ಕಾಮತ್, ಆರ್ಥಿಕ ಸಮಿತಿ ಸಂಚಾಲಕ ನಾರಾಯಣ ಕೇಕಡ್ಕ, ಎನ್.ಎ.ರಾಮಚಂದ್ರ, ರಾಧಾಕೃಷ್ಣ ರೈ ಬೂಡು, ಹೇಮಂತ್...
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ ಗೊಂಡಿದೆ ಎಂದು ತಿಳಿದುಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ ಅವರುಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.
ವಳಲಂಬೆಯಲ್ಲಿ ಮೊಬೈಲ್ ,ಪಾನ್ ಕಾರ್ಡ್ ಹಾಗೂ ಎಟಿಎಂ ಕಾರ್ಡ್ ಬಿದ್ದು ಸಿಕ್ಕಿರುತ್ತದೆ. ಕಳೆದುಕೊಂಡವರು ವಳಲಂಬೆಯಲ್ಲಿರುವ ಪ್ರಸಾದ್ ಕೆ ಅವರ ಅಂಗಡಿಯನ್ನು ಸಂಪರ್ಕಿಸಲು ತಿಳಿಸಿದ್ದಾರೆ.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವಳಲಂಬೆಯಲ್ಲಿ 74 ನೇ ಗಣರಾಜ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ನಡೆಯಿತು. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ರವೀಶ್ ಕುಮಾರ್ ಮೊಟ್ಟೆಮನೆ ಧ್ವಜಾರೋಹಣ ನೆರವೇರಿಸಿದರು .ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ವೆಂಕಟ್ ವಳಲಂಬೆ, ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ,...
ಮುಂಬರುವ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಾರ್ಟಿ ಸಮಿತಿಗಳನ್ನು ಪುನರ್ ರಚಿಸಿದ್ದು ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಸುಳ್ಯದ ಅಶೋಕ್ ಎಡಮಲೆ ಅವರನ್ನು ನೇಮಕ ಮಾಡಲಾಗಿದೆ. ಜ.23ರಂದು ಬೆಂಗಳೂರಿನಲ್ಲಿ ಆಮ್‌ಆದಿ ಪಾರ್ಟಿ ರಾಜ್ಯ ಉಸ್ತುವಾರಿಯಾಗಿರುವ ದೆಹಲಿ ಶಾಸಕ ದಿಲೀಪ್ ಪಾಂಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನೇಮಕ ಮಾಡಲಾಗಿದೆ. ಅಶೋಕ್ ಎಡಮಲೆಯವರು ಹಿಂದೆ...
ಪುತ್ತೂರು ಜವುಳಿ ಉದ್ಯಮದಲ್ಲೇ ಹೊಸತನವನ್ನು ಪರಿಚಯಿಸಿರುವ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್ ರಸ್ತೆಯ ರಾಧಾಸ್‌ನ 28ನೇ ವಾರ್ಷಿಕ ಸಂಭ್ರಮಾಚರಣೆಯನ್ನು ಗ್ರಾಹಕರಿಗೆ ವಿಶೇಷ ಕೊಡುಗೆಗಳನ್ನು ನೀಡುವ ಮೂಲಕ ಸಂಭ್ರಮಾಚರಣೆಯ ಅಂಗವಾಗಿ ಮದುವೆ ಜವುಳಿ ಸೇರಿದಂತೆ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಎಲ್ಲಾ ರೀತಿಯ ರೆಡಿಮೇಡ್ ಉಡುಪುಗಳ ಮೇಲೆ ಶೆ.20 ಡಿಸ್ಕೌಂಟ್ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದು ಇದಕ್ಕೆ ಗ್ರಾಹಕರಿಂದ...