
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಯ ತಹಶೀಲ್ದಾರ್ ಕು. ಅನಿತಾಲಕ್ಷ್ಮೀ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿಗೆ ವರ್ಗಾವಣೆ ಗೊಂಡಿದೆ ಎಂದು ತಿಳಿದುಬಂದಿದೆ. ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವಯ ಕಂದಾಯ ಇಲಾಖೆಯ ತಹಶೀಲ್ದಾರ್ ಅವರುಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ವರ್ಗಾಯಿಸಿ ಆದೇಶಿಸಿದೆ.