ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಅಣ್ಣಪ್ಪಾದಿ ದೈವಗಳ ನೇಮೋತ್ಸವವು ಫೆ.11 ಶನಿವಾರದಿಂದ ಆರಂಭಗೊಳ್ಳಲಿದ್ದು, ಫೆ.14 ಮಂಗಳವಾರದ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 4.30ಕ್ಕೆ ತಂತ್ರಿಗಳವರ ಆಗಮನ, ಸಂಜೆ ಗಂಟೆ 5.00ಕ್ಕೆ ಊರ ಭಕ್ತಾದಿಗಳಿಂದ ಬಾಳಿಲದಿಂದ ಮೆರವಣಿಗೆ ಮೂಲಕ ಶ್ರೀ ದೇವಳಕ್ಕೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಲಿದ್ದು, ವಿಶೇಷ ಆಕರ್ಷಣೆಯಾಗಿ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ಇವರಿಂದ ಚೆಂಡೆವಾದನ ಹಾಗೂ ವಿವಿಧ ತಂಡಗಳ ಕುಣಿತ ಭಜನೆಯೊಂದಿಗೆ ಹಸಿರುವಾಣಿಯನ್ನು ದೇವಾಲಯಕ್ಕೆ ತಂದು ಸಮರ್ಪಿಸಲಾಗುವುದು. ರಾತ್ರಿ ಗಂಟೆ 7.00ರಿಂದ ಕೋಟೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ವತಿಯಿಂದ ಹಸಿರು ಹೊರೆ ಕಾಣಿಕೆ ಸಮರ್ಪಣೆ, ರಾತ್ರಿ ಗಂಟೆ 7.30ರಿಂದ ಬಿಂಬಶುದ್ಧಿ, ವಾಸ್ತುಪೂಜೆ, ವಾಸ್ತು ರಕ್ಷೋಘ್ನ ಹೋಮ ನಡೆಯಲಿರುವುದು. ಫೆ.12ರಂದು ಬೆಳಗ್ಗೆ 7.30ರಿಂದ ಗಣಪತಿ ಹವನ, ಕಲಶ ಪೂಜೆ, ಕಲಶಾಭಿಷೇಕ, ಬೆಳಗ್ಗೆ 11.00ರಿಂದ ಮಹಿಳೆಯರಿಂದ ಕುಂಕುಮಾರ್ಚನೆ, ಮಧ್ಯಾಹ್ನ 12.30ರಿಂದ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.00ರಿಂದ 6.30 ತಾಯಂಬಕಂ, ರಾತ್ರಿ 7.30ರಿಂದ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ, ರಾತ್ರಿ 8.30ರಿಂದ ಶ್ರೀ ಮಂಜುನಾಥೇಶ್ವರ ಸ್ವಾಮಿ ಹಾಗೂ ಅಮ್ಮನವರ ಬಲಿ ಉತ್ಸವ ನಡೆದು ಶ್ರೀ ದೇವರ ಗಂಧಪ್ರಸಾದ ವಿತರಣೆಯಾಗಲಿದೆ. ಫೆ.13ರಂದು ಬೆಳಗ್ಗೆ 7.30ರಿಂದ ಗಣಪತಿ ಹವನ, ಬೆಳಗಿನ ಪೂಜೆ, ಬೆಳಗ್ಗೆ 10.00ರಿಂದ ಶ್ರೀ ದೇವರ ಹಾಗೂ ಅಮ್ಮನವರ ದರ್ಶನ ಬಲಿ ಉತ್ಸವ, ಶ್ರೀ ದೇವರ ಗಂಧಪ್ರಸಾದ, ಬಟ್ಟಲು ಕಾಣಿಕೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 4.00ಕ್ಕೆ ಧರ್ಮದೈವಗಳಾದ ಕಾಳರಾಹು, ಕಾಳರ್ಕಾಯಿ, ಕುಮಾರಸ್ವಾಮಿ, ಕನ್ಯಾಕುಮಾರಿ ದೈವಗಳ ಭಂಡಾರ ತೆಗೆಯುವುದು, ಸಂಜೆ 6.00ರಿಂದ ರಾತ್ರಿ ಪೂಜೆ, ಪ್ರಸಾದ ಭೋಜನದ ನಂತರ ರಾತ್ರಿ 9.00ರಿಂದ ಅಣ್ಣಪ್ಪ ಮಾಡದಲ್ಲಿ ಧರ್ಮದೈವಗಳ ನೇಮ, ಕಾಣಿಕೆ, ಪ್ರಸಾದ ವಿತರಣೆ ನಡೆಯಲಿದೆ. ಫೆ.14ರಂದು ಬೆಳಗ್ಗೆ 6.00ರಿಂದ ಬೆಳಗ್ಗಿನ ಪೂಜೆ, ಬೆಳಗ್ಗೆ 7.30ರಿಂದ ಕಾಯಾರ ಕಲ್ಲೇರಿತ್ತಾಯ ಮಾಡದಲ್ಲಿ ಕಲ್ಲೇರಿತ್ತಾಯ ದೈವದ ನೇಮೋತ್ಸವ, ಪ್ರಸಾದ ವಿತರಣೆ, ಶ್ರೀ ದೇವಳದಿಂದ ಅನ್ನಸಂತರ್ಪಣೆ ನಡೆಯಲಿರುವುದು. ಬೆಳಗ್ಗೆ 10.00ರಿಂದ ಶ್ರೀ ದೇವಳದಲ್ಲಿ ರುದ್ರಾಭಿಷೇಕ, ಮಧ್ಯಾಹ್ನ 12.30ರಿಂದ ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 6.00ರಿಂದ ಅಣ್ಣಪ್ಪ ಸ್ವಾಮಿ, ಪಂಜುರ್ಲಿ, ಗುಳಿಗ ದೈವಗಳ ಭಂಡಾರ ತೆಗೆಯುವುದು, ರಾತ್ರಿ 8.30ರಿಂದ ರಂಗಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನದ ನಂತರ ರಾತ್ರಿ ಗಂಟೆ 10.00ರಿಂದ ಅಣ್ಣಪ್ಪ ಸ್ವಾಮಿ ಮಾಡದಲ್ಲಿ ಅಣ್ಣಪ್ಪ ಸ್ವಾಮಿ, ಪಂಜುರ್ಲಿ ದೈವಗಳ ನೇಮ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ ನಡೆಯಲಿರುವುದು. ಬೆಳಗಿನ ಜಾವ ದೇವಾಲಯದ ವಠಾರದಲ್ಲಿ ಶ್ರೀ ಗುಳಿಗ ದೈವದ ನೇಮ, ಕಾಣಿಕೆ, ಪ್ರಸಾದ ವಿತರಣೆ, ಬಲಿ ನಡೆಯಲಿದೆ.
ಪ್ರತಿಷ್ಟಾ ವಾರ್ಷಿಕೋತ್ಸವದ ಅಂಗವಾಗಿ ಫೆ.11ರಂದು ಸಂಜೆ ಗಂಟೆ 7-30ರಿಂದ 8-30ರವರೆಗೆ ಚೊಕ್ಕಾಡಿ ಶ್ರೀ ಸತ್ಯಸಾಯಿ ಸೇವಾ ಸಮಿತಿಯ ಸದಸ್ಯರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಫೆ.12ರಂದು ಬೆಳಗ್ಗೆ 10-00ರಿಂದ 11-00ರವರೆಗೆ ಗೀತಾಜ್ಞಾನಯಜ್ಞ ತಂಡ ಬಾಳಿಲ ಇವರಿಂದ ಭಗವದ್ಗೀತಾ ಪಾರಾಯಣ ಕಾರ್ಯಕ್ರಮ ನಡೆಯಲಿದೆ. ಸಂಜೆ 5-00ರಿಂದ 6-00ರವರೆಗೆ ಚೊಕ್ಕಾಡಿ ಶ್ರೀ ದೇವಿ ಮಹಿಳಾ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಫೆ.13ರಂದು ಬೆಳಗ್ಗೆ 11-30ರಿಂದ 1.00ರವರೆಗೆ ಶ್ರೀ ಷಣ್ಮುಖ ದಡ್ಡಾಲಡ್ಕ ಹಾಗೂ ಬಳಗ, ಬೆಂಗಳೂರು ಇವರಿಂದ ಶಾಸ್ತ್ರೀಯ ಸಂಗೀತ ಕಛೇರಿ ಕಾರ್ಯಕ್ರಮ ನಡೆಯಲಿರುವುದು. ಸಂಜೆ ಗಂಟೆ 4-00ರಿಂದ 5-00ರ ತನಕ ಬಾಳಿಲ ಅಂಗನವಾಡಿ ಮತ್ತು ಇಂದ್ರಾಜೆ ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ ಗಂಟೆ 5-30ರಿಂದ ಬಾಳಿಲ ವಿದ್ಯಾಬೋಧಿನೀ ಹಿ.ಪ್ರಾ.ಶಾಲಾ ಮಕ್ಕಳಿಂದ ಕುಣಿತ ಭಜನೆ, ಸಂಜೆ ಗಂಟೆ 6-30ರಿಂದ ತಾಳನಿನಾದಂ ಭಜನಾ ತಂಡ ಪಡ್ಪಿನಂಗಡಿ ಇವರಿಂದ ಕುಣಿತ ಭಜನೆ ನಡೆಯಲಿರುವುದು. ಫೆ.14ರಂದು ಸಂಜೆ 6-30 ರಿಂದ 7-30ರವರೆಗೆ ಶ್ರೀ ರಾಮ ಭಜನಾ ಮಂಡಳಿ ಕಲ್ಮಡ್ಕ ಇವರಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ರಾತ್ರಿ ಗಂಟೆ 7-30ರಿಂದ ಸಭಾ ಕಾರ್ಯಕ್ರಮ ನಡೆಯಲಿದ್ದು, ಮುಖ್ಯ ಅಭ್ಯಾಗತರಾಗಿ ಸುಬ್ರಹ್ಮಣ್ಯ ವಲಯದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಪ್ರವೀಣ್ ಶೆಟ್ಟಿ ಭಾಗವಹಿಸಲಿದ್ದಾರೆ. ಅಭ್ಯಾಗತರಾಗಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸವಿತಾ ಚಾಕೋಟೆಡ್ಕ, ಉಪಾಧ್ಯಕ್ಷರಾದ ಶ್ರೀಮತಿ ತ್ರಿವೇಣಿ ವಿಶ್ವೇಶ್ವರ, ಕಳಂಜ ಬಾಳಿಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಕೂಸಪ್ಪ ಗೌಡ ಮುಗುಪ್ಪು ಉಪಸ್ಥಿತರಿರಲಿದ್ದಾರೆ. ಕಾರ್ಯಕ್ರಮದಲ್ಲಿ ಹಿರಿಯ ಯಕ್ಷಗಾನ ಕಲಾವಿದರು, ಸೇವಾಕರ್ತರಾದ ಶ್ರೀ ಮಲಯಾಳ ಗೋವಿಂದ ಭಟ್, ಹಿರಿಯ ಆರೋಗ್ಯ ಕಾರ್ಯಕರ್ತರಾದ ಶ್ರೀಮತಿ ವಸಂತಿ ಎಸ್ ಭಟ್ ಹಾಗೂ ಶ್ರೀಮತಿ ಬೇಬಿ ಸಿ.ಸಿ, ಮೆಸ್ಕಾಂ ಸಿಬ್ಬಂದಿಗಳಾದ ಶ್ರೀ ವಿಕ್ರಂ ಶಿರೂರು ಹಾಗೂ ಶ್ರೀ ಮಂಜುನಾಥ ನಾಗರತ್ತಿ, ಸುಕೃತಿ ಮಹಿಳಾ ಕಾಯಕೋತ್ಸವ ತಂಡ ಬಾಳಿಲ – ಮುಪ್ಪೇರ್ಯ ಇವರುಗಳಿಗೆ ಗೌರವಾರ್ಪಣೆ ನಡೆಯಲಿರುವುದು. ರಾತ್ರಿ ಗಂಟೆ 9-00ರಿಂದ ಶ್ರೀ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ-ಮುಪ್ಪೇರ್ಯ ತಂಡದ ಸದಸ್ಯರಿಂದ ಚೆಂಡೆ ವಾದನ ಸೇವೆ ನೆರವೇರಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಗವದ್ಭಕ್ತರು ಆಗಮಿಸಿ, ಶ್ರೀ ದೇವರ ಪ್ರಸಾದ ಸ್ವೀಕರಿಸಿ ಅನುಗ್ರಹಕ್ಕೆ ಪಾತ್ರರಾಗುವಂತೆ ವಿನಂತಿಸಲಾಗಿದೆ.
- Friday
- November 22nd, 2024