ಅಮರಮೂಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚೊಕ್ಕಾಡಿ-ಮುಳ್ಕುಂಜ-ಮಾಳಿಗೆ ರಸ್ತೆಯ ಕಾಂಕ್ರೀಟಿಕರಣ ಹಲವು ವರ್ಷಗಳ ಬೇಡಿಕೆಯಾಗಿತ್ತು. ಈ ಹಿಂದೆ ಫಲಾನುಭವಿಗಳು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಎಸ್ ಎನ್ ಮನ್ಮಥ ರವರ ಅನುದಾನದ ಕಾಂಕ್ರೀಟಿಕರಣ ಹೊರತುಪಡಿಸಿ ಉಳಿದವು ಬೇಡಿಕೆಯಾಗಿಯೇ ಉಳಿದಿತ್ತು. ಈ ಬಾರಿ ಗ್ರಾಮ ಪಂಚಾಯತ್ ವತಿಯಿಂದ ರೂ.3 ಲಕ್ಷದಲ್ಲಿ ಕಾಂಕ್ರೀಟಿಕರಣಕ್ಕೆ ಚೊಕ್ಕಾಡಿ ದೈವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಾಥ್ ನೆಲ್ಲಿಕುಂಜ ತೆಂಗಿನಕಾಯಿ ಒಡೆಯುವ ಮೂಲಕ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪದ್ಮಪ್ರಿಯಾ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಶೋಕ್ ಚೂಂತಾರು, ಸೀತಾ ಹೆಚ್, ಚೊಕ್ಕಾಡಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೇಶವ ಕರ್ಮಜೆ, ಚೊಕ್ಕಾಡಿ ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಾಲಕೃಷ್ಣ ಬೊಳ್ಳೂರು, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಐತಪ್ಪ ನಾಯ್ಕ, ಸ್ಥಳೀಯರಾದ ಪೂವಣಿ ಗೌಡ, ದಾಸಪ್ಪ ಗೌಡ, ವಸಂತ ಗೌಡ, ಸತೀಶ್ ಪಿಲಿಕಜೆ, ಪ್ರಮೋದ್ ಚೊಕ್ಕಾಡಿ ಮತ್ತಿತರರು ಉಪಸ್ಥಿತರಿದ್ದರು.
- Wednesday
- December 4th, 2024