
ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಫೆ.18ರಿಂದ ಫೆ.20ರವರೆಗೆ ನಡೆಯಲಿದ್ದು, ಈ ಪ್ರಯುಕ್ತ ಫೆ.12ರಂದು ಗೊನೆ ಮುಹೂರ್ತ ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಭಟ್, ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಗಿರಿಧರ ಗೌಡ ವಿನೋಬನಗರ, ಅಡ್ಕಾರು ಇಲೆಕ್ಟ್ರಾನಿಕ್ಸ್ ಮಾಲಕ ದಿನೇಶ್ ಅಡ್ಕಾರು ಸೇರಿದಂತೆ ಜಾತ್ರೋತ್ಸವ ಸಮಿತಿಯ ಪದಾಧಿಕಾರಿಗಳು, ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರುಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಉಪಸ್ಥಿತರಿದ್ದರು.