
ವಿಶ್ವ ಹಿಂದೂ ಪರಿಷತ್ ಭಜರಂಗದಳ, ದುರ್ಗಾವಾಹಿನಿ ಸುಳ್ಯ ಪ್ರಖಂಡದ ವತಿಯಿಂದ ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ರಕ್ತನಿಧಿ ಘಟಕ, ಭಾರತೀಯ ವೈದ್ಯಕೀಯ ಸಂಘದ ಸುಳ್ಯ ಶಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಸುಳ್ಯ ತಾಲೂಕು ಸರಕಾರಿ ಆಸ್ಪತ್ರೆ ಇವರ ಸಹಯೋಗದಲ್ಲಿ ಸುಳ್ಯ ತಾಲೂಕು ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಅವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘದ ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನಾ. ಸೀತಾರಾಮ್, ವಿಶ್ವ ಹಿಂದೂ ಪರಿಷತ್ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಸೋಮಶೇಖರ್ ಪೈಕ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಕರುಣಾಕರ ಹಾಗೂ ಸಂಘಟನೆಯ ಪ್ರಮುಖರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ವಿಶೇಷ ರಕ್ತದಾನಿಗಳನ್ನು ಗುರುತಿಸಿ ಗೌರವಿಸಲಾಯಿತು. ಆರೋಗ್ಯ ಮಿತ್ರ ಮುರಳಿ ನಳಿಯಾರು ಕಾರ್ಯಕ್ರಮ ನಿರೂಪಿಸಿದರು.