ಎಡಮಂಗಲ ಗ್ರಾಮದ ಕಾರಣೀಕ ಕ್ಷೇತ್ರ ಎಡಮಂಗಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ
ಪೂರ್ವಾಶಿಷ್ಟ ಸಂಪ್ರದಾಯ ಪ್ರಕಾರ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳವರ ನೇತೃತ್ವದಲ್ಲಿ
ಐದು ದಿವಸಗಳ ಉತ್ಸವಾದಿಗಳು ಸೇರಿದಂತೆ ವಾರ್ಷಿಕ ಜಾತ್ರೋತ್ಸವವು ಇಂದು(ಫೆ.13) ಆರಂಭಗೊಂಡಿದ್ದು ಫೆ.19ರ ತನಕ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು ರಾತ್ರಿ ಧ್ವಜಾರೋಹಣ ನಡೆಯಿತು. ನಂತರ ಬಲಿ ಹೊರಟು ಉತ್ಸವ, ಶ್ರೀ ರಂಗಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಸ್ಥಳೀಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷರಾದ ಶ್ರೀ ಹರಿ ನೂಚಿಲ, ಪ್ರಧಾನ ಅರ್ಚಕರಾದ ಶ್ರೀ ಸೀತಾರಾಮಯ್ಯ ನೂಚಿಲ, ವ್ಯವಸ್ಥಾಪನ ಸಮಿತಿಯ ಶ್ರೀ ರಾಮಕೃಷ್ಣ ರೈ ಮಾಲೆಂಗ್ರಿ, ಶ್ರೀಮತಿ ಭವಾನಿ ಚಂದ್ರಶೇಖರ ಪರ್ಲ, ಶ್ರೀ ಗಿರೀಶ್ ನಡುಬೈಲು, ಶ್ರೀ ರವೀಂದ್ರ ದೇರಳ, ಶ್ರೀ ದೇವಿಪ್ರಸಾದ್ ದೋಳ್ಪಾಡಿ, ಶ್ರೀ ಬಾಲಕೃಷ್ಣ ಬಳಕ್ಕಬೆ, ಶ್ರೀಮತಿ ಪ್ರಿಯಾಂಕ ಪದ್ಮನಾಭ ಪುಂಣ್ಚತ್ತಡಿ, ದೇವಸ್ಥಾನದ ಕೂಡುಕಟ್ಟಿನ ಸಮಸ್ತರು, ಅರ್ಚಕರು, ಸಹಾಯಕರು, ಸಿಬ್ಬಂದಿ ವರ್ಗದವರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು. ಫೆ.14ರಂದು ರಾತ್ರಿ ಗಂಟೆ 7.30ರಿಂದ ಬಲಿ ಹೊರಟು ಉತ್ಸವ ಮತ್ತು ತರವಾಡು ಮಾಲೆಂಗ್ರಿ ಪಿಲಿಕುಂಜ ಸ್ಥಾನದಿಂದ ಶ್ರೀ ಮಹಾಲಿಂಗರಾಯ ದೈವದ ಭಂಡಾರ ಬಂದು ಓಲೆ ಸವಾರಿ, ಹೊಸಮಜಲು ಕಟ್ಟೆಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ರಾತ್ರಿ ಶ್ರೀ ನೇಲ್ಯಾರು ನೇಮ ಹಾಗೂ ಉಳ್ಳಾಲ್ತಿ ನೇಮೋತ್ಸವ ಜರುಗಲಿದೆ. ಫೆ.15ರಂದು ಬೆಳಗ್ಗೆ 9.30ರಿಂದ ಬಲಿ ಹೊರಟು ಉತ್ಸವ “ಶ್ರೀ ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿರುವುದು. ರಾತ್ರಿ ವಸಂತ ಕಟ್ಟೆಯಲ್ಲಿ ಪೂಜೆ ನಡೆಯಲಿದೆ. ಫೆ.16ರಂದು ಬೆಳಗ್ಗೆ 9.30ರಿಂದ ಉತ್ಸವ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ 7.00ರಿಂದ ಬಲಿ ಹೊರಟು ಉತ್ಸವ ಬಲಿಯೊಂದಿಗೆ ಕೋಲಾಟ, ಮಹಾರಥೋತ್ಸವ ಪಾಟಾಳಿ ಕಟ್ಟೆ ಪೂಜೆ ಮತ್ತು ಮರೋಳಿ ಶ್ರೀ ಶಿರಾಡಿ ರಾಜನ್ ದೈವ ಮತ್ತು ಉದ್ರಾಂಡಿ ದೈವಗಳ ಓಲೆ ಸವಾರಿ ನಡೆಯಲಿದೆ. ನಂತರ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಕಟ್ಟೆಪೂಜೆ, ಮಹಾಪೂಜೆ, ಪ್ರಸಾದ ವಿತರಣೆ, ಶ್ರೀ ಭೂತಬಲಿ ಮತ್ತು “ಶ್ರೀ ದೇವರ ಶಯನೋತ್ಸವ” ನೆರವೇರಲಿದೆ. ಫೆ.17ರಂದು ಬೆಳಗ್ಗೆ ಕವಾಟೋದ್ಘಾಟನೆ, ತೈಲಾಭಿಷೇಕ, ಪಂಚಾಮೃತಾಭಿಷೇಕ ನಡೆಯಲಿದ್ದು, ಅಪರಾಹ್ನ ಶ್ರೀ ಎಲ್ಯಾರು ದೈವಗಳ ನೇಮ, ಮಿತ್ತೂರು ನಾಯರ್ ದೈವದ ನೇಮ, ರಾತ್ರಿ ಬಲಿ ಹೊರಟು ವಸಂತ ಕಟ್ಟೆಯಲ್ಲಿ ಸಾರ್ವಜನಿಕ ಕಟ್ಟೆಪೂಜೆ, ಬಿಲ್ವಪತ್ರೆ ಕಟ್ಟೆಯಲ್ಲಿ ಕಟ್ಟೆಪೂಜೆ ನಂತರ ನೂಚಿಲ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ಕಟ್ಟೆಪೂಜೆ ಹಾಗೂ ಕುಮಾರಧಾರ ಭಂಡಾರಗಯದಲ್ಲಿ “ಅವಭೃತಸ್ನಾನ”, ಧ್ವಜ ಅವರೋಹಣ ನಡೆಯಲಿರುವುದು. ಫೆ.18ರಂದು ಬೆಳಗ್ಗೆ ಗಂಟೆ 9.00ರಿಂದ ಗಣಪತಿ ಹವನ, ಕಲಶ ಪೂಜೆ, ರುದ್ರಾಭಿಷೇಕ, ಕಲಶಾಭಿಷೇಕ, ಮಹಾಪೂಜೆ, “ಮಂತ್ರಾಕ್ಷತೆ”, ಪ್ರಸಾದ ವಿತರಣೆ ನಡೆದು “ಮಹಾ ಅನ್ನಸಂತರ್ಪಣೆ” ನಡೆಯಲಿದೆ. ಫೆ.19ರಂದು ಬೆಳಗ್ಗೆ ಮರೋಳಿ ಶಿರಾಡಿ ರಾಜನ್ ದೈವದ ಭಂಡಾರ ಬಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಪೂಜೆ ನೆರವೇರಲಿದೆ. ಜಾತ್ರೋತ್ಸವದ ಅಂಗವಾಗಿ ಪ್ರತಿದಿನ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಭಕ್ತಾದಿಗಳು ಸಕುಟುಂಬಿಕರಾಗಿ ಬಂದು ಗಂಧ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗುವಂತೆ ದೇವಾಲಯದ ಅಧ್ಯಕ್ಷರಾದ ಶ್ರೀ ಹರಿ ನೂಚಿಲರವರು ವಿನಂತಿಸಿದ್ದಾರೆ.