Ad Widget

ಬೆಳ್ಳಾರೆ ಅಜಪಿಲ ಜಾತ್ರೋತ್ಸವ; ಪೇಟೆ ಸವಾರಿ, ಸಿಡಿಮದ್ದು ಪ್ರದರ್ಶನ, ಫೆ.17ರಂದು ದರ್ಶನ ಬಲಿ, ಬಟ್ಟಲುಕಾಣಿಕೆ, ಅಗ್ನಿಗುಳಿಗ ದೈವದ ನೇಮೋತ್ಸವ

ಬೆಳ್ಳಾರೆ ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಫೆ.13ರಂದು ಆರಂಭಗೊಂಡಿದ್ದು, ಫೆ.17ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಜಾತ್ರೋತ್ಸವದ ಪ್ರಯುಕ್ತ ಇಂದು (ಫೆ.16ರಂದು) ಬೆಳಿಗ್ಗೆ ಗಣಪತಿ ಹವನ, ಉಷಾಃಪೂಜೆ, ಶಿವೇಲಿ, ನವಕ ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಶಿವೇಲಿ, ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ಭೂತಬಲಿ, ಸೇವೆಸುತ್ತು, ಪೇಟೆ ಸವಾರಿ, ಸಿಡಿಮದ್ದು ಪ್ರದರ್ಶನ ನಡೆಯಿತು.

. . . . . . .

ಫೆ.17 ಶುಕ್ರವಾರದಂದು ಬೆಳಿಗ್ಗೆ ಗಂಟೆ 7.00ಕ್ಕೆ ಕವಾಟೋದ್ಘಾಟನೆ, ತೈಲಾಭ್ಯಂಜನ, ಉಷಾಃಪೂಜೆ, ಆರಾಟುಬಲಿ ನಂತರ ಅವಭೃತ ಸ್ನಾನ, ದರ್ಶನ ಬಲಿ ನಡೆಯಲಿದೆ. ಮಧ್ಯಾಹ್ನ 11.30ಕ್ಕೆ ರಾಜಾಂಗಣ ಪ್ರಸಾದ, ಬಟ್ಟಲುಕಾಣಿಕೆ, ಧ್ವಜ ಅವರೋಹಣ ,ಸಂಪ್ರೋಕ್ಷಣೆ, ಮಹಾಪೂಜೆ, ಮಂತ್ರಾಕ್ಷತೆ, ಅನ್ನಪ್ರಸಾದ ನಡೆಯಲಿದೆ. ರಾತ್ರಿ 7.30ಕ್ಕೆ ಅಗ್ನಿಗುಳಿಗ ದೈವದ ಭಂಡಾರ ತೆಗೆಯುವುದು, ಭೂತಕೋಲ, ಬಟ್ಟಲುಕಾಣಿಕೆ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!