ಪೆರಾಜೆ : ಸಹಕಾರಿ ಸಂಘದ ನೇತೃತ್ವದಲ್ಲಿ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರ
ಪೆರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಬಾರ್ಡ್ ಪ್ರಾಯೋಜಕತ್ವದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಸಹಯೋಗದೊಂದಿಗೆ ಫೆ.15 ರಂದು ಗ್ರಾಮದ ಸ್ವಸಹಾಯ ಸಂಘಗಳು ಸ್ತ್ರೀಶಕ್ತಿ ಗುಂಪುಗಳ ಸದಸ್ಯರುಗಳಿಗೆ ಆರ್ಥಿಕ ಸಾಕ್ಷರತೆ ಮತ್ತು ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಮಾಹಿತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಶಾಖಾ ವ್ಯವಸ್ಥಾಪಕರಾದ ಭಾಸ್ಕರ್, ಸಹಾಯಕ ಶಾಖಾ ವ್ಯವಸ್ಥಾಪಕ ಶಶಿಕುಮಾರ್ ಕೆ ಎಸ್ ಹಾಗೂ ಸೇಲ್ಸ್ ಎಕ್ಸಿಕ್ಯೂಟಿವ್ ನಂಜಪ್ಪ ಆರ್ಥಿಕ ಸಾಕ್ಷರತೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಬಗ್ಗೆ ಸವಿವರವಾಗಿ ಸದಸ್ಯರೊಂದಿಗೆ ವಿಚಾರವನ್ನು ವಿನಿಮಯ ಮಾಡಿಕೊಂಡರು. ಕಾರ್ಯಕ್ರಮದಲ್ಲಿ ಸಂಸ್ಥೆಯಉಪಾಧ್ಯಕ್ಷರಾದ ಅಶೋಕ ಪಿ ಎಂ, ಕೆಡಿಸಿಸಿ ಬ್ಯಾಂಕಿನ ಸಹಕಾರ ಸಂಘಗಳ ಮೇಲ್ವಿಚಾರಕರಾದ ವಿಜಯ, ಸಂಸ್ಥೆಯ ನಿರ್ದೇಶಕರುಗಳಾದ ಧನಂಜಯ ಕೋಡಿ, ಶೇಷಪ್ಪ ಎನ್ ವಿ, ಪ್ರಮೀಳಾ ಏನ್, ಜಯರಾಮ ಪಿ ಟಿ, ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲೋಕೇಶ್ ರವರು ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಸ್ವಸಹಾಯ ಸಂಘ ಹಾಗೂ ಶ್ರೀ ಶಕ್ತಿ ಗುಂಪುಗಳ ಸದಸ್ಯರು ಭಾಗವಹಿಸಿದ್ದರು.