
ಕಲಿಕೆಯ ಜತೆಗೆ ಒಳ್ಳೆಯ ವ್ಯಕ್ತಿತ್ವ ವಿಕಸನಗೊಳ್ಳಲು ಎನ್ನೆಸ್ಸೆಸ್ ಶಿಬಿರ ಸಹಕಾರಿ ಎಂದು ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹೇಳಿದರು.
ಅವರು ಇಂದು ವಳಲಂಬೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಕೆ.ವಿ.ಜಿ.ಪಾಲಿಟೆಕ್ನಿಕ್ ಸುಳ್ಯ ಇದರ ಸಹಯೋಗದೊಂದಿಗೆ ನಡೆದ ದಕ್ಷಿಣ ಕರ್ನಾಟಕ ವಿಭಾಗೀಯ ಮಟ್ಟದ ಅಂತರ್ ಪಾಲಿಟೆಕ್ನಿಕ್ ಎನ್ನೆಸ್ಸೆಸ್ ಶಿಬಿರ ಉದ್ಘಾಟಿಸಿ ಮಾತನಾಡಿದರು. ಶಿಬಿರದಲ್ಲಿ ಇಲ್ಲಿನ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳುಲು ಎನ್ನೆಸ್ಸೆಸ್ ಶಿಬಿರ ಸಹಕಾರಿಯಾಗಲಿದೆ ಎಂದರು.
ಕೆವಿಜಿ ಪಾಲಿಟೆಕ್ನಿಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಜಯಪ್ರಕಾಶ್ ಕೆ., ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಿ.ಕೆ.ಬೆಳ್ಯಪ್ಪ ಗೌಡ, ಗ್ರಾ.ಪಂ.ಸದಸ್ಯ ವೆಂಕಟ್ ವಳಲಂಬೆ, ಕೆವಿಜಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಸುರೇಶ್ ಎಂ.ಕೆ., ಕೆವಿಜಿ ಪಾಲಿಟೆಕ್ನಿಕ್ ಉಪಪ್ರಾಂಶುಪಾಲ ಶ್ರೀಧರ್ ಎಂ.ಕೆ., ಸರಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಬಿ.ತೀರ್ಥರಾಮ, ಎಸ್ ಡಿ ಎಂ ಸಿ ಅಧ್ಯಕ್ಷ ರವೀಶ್ ಮೊಟ್ಟೆ, ವಳಲಂಬೆ ಸ.ಹಿ.ಪ್ರಾ.ಶಾಲೆಯ ಮುಖ್ಯಶಿಕ್ಷಕಿ ಪ್ರಮೀಳ ವಿ.ಎಸ್. , ಹಿರಿಯ ವಿದ್ಯಾರ್ಥಿ ಸಂಘಧ ಅಧ್ಯಕ್ಷ ಗೋಪಾಲಕೃಷ್ಣ ಪುರ್ಲುಮಕ್ಕಿ, ಸುಜಿತ್ ಎಂ.ಎಸ್., ಶಿಬಿರಾಧಿಕಾರಿ ಸುನಿಲ್ ಕುಮಾರ್ ಎನ್.ಪಿ., ಘಟಕ ನಾಯಕರಾದ ವೀಕ್ಷಿತ್ ಸಿಎಂ., ಪ್ರಜ್ವಲ್ ಬಿ., ಕು.ತೇಜಶ್ರೀ ಎಂ., ಕು.ಗೀತಾಂಜಲಿ ಉಪಸ್ಥಿತರಿದ್ದರು. ಶಿಬಿರಾಧಿಕಾರಿ ಚಂದ್ರಶೇಖರ ಬಿಳಿನೆಲೆ ಸ್ವಾಗತಿಸಿ, ಸುನಿಲ್ ಕುಮಾರ್ ವಂದಿಸಿದರು. ನಾರಾಯಣ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಫೆ.24 ರಂದು ಸಮಾರೋಪ ಸಮಾರಂಭ ನಡೆಯಲಿದೆ.