
ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ನೇತೃತ್ವದಲ್ಲಿ ಕೆ.ವಿ.ಜಿ. ಡೆಂಟಲ್ ಕಾಲೇಜ್ ಮತ್ತು ಆಸ್ಪತ್ರೆ, ಸುಳ್ಯ, ದ.ಕ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇವರ ಸಹಯೋಗದಲ್ಲಿ ಫೆ.21ರಂದು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ ಇದರ ವಠಾರದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ನಡೆಯಲಿದೆ. ಶಿಬಿರವು ಪೂರ್ವಾಹ್ನ ಗಂಟೆ 9-00ರಿಂದ ಅಪರಾಹ್ನ 1-00ರ ತನಕ ನಡೆಯಲಿದ್ದು, ಶಿಬಿರದಲ್ಲಿ ದಂತ ಕುಳಿ ತುಂಬುವಿಕೆ, ಹಲ್ಲಿನ ಸ್ವಚ್ಛತೆ, ಹಲ್ಲು ಕೀಳುವಿಕೆ, ಕೃತಕ ದಂತ ಜೋಡಣೆ ಇತ್ಯಾದಿ ಚಿಕಿತ್ಸೆಗಳು ಲಭ್ಯವಿರುತ್ತದೆ. ಸಾರ್ವಜನಿಕರು ಈ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಲಯನ್ಸ್ ಕ್ಲಬ್ ಬೆಳ್ಳಾರೆ ಜಲದುರ್ಗ ಇದರ ಅಧ್ಯಕ್ಷರಾದ ಲ| ವಿಠಲ ಶೆಟ್ಟಿ ಪೆರುವಾಜೆ ವಿನಂತಿಸಿದ್ದಾರೆ.