Ad Widget

ಚುನಾವಣೆಗೆ ಸಿದ್ಧರಾಗಿ….ಡಾ ಚೂಂತಾರು.ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ

. . . . . . . . .

. . . . . . .

ಮುಂದಿನ ಮೇ ತಿಂಗಳಲ್ಲಿ ನಡೆಯುವ ಕರ್ನಾಟಕ ರಾಜ್ಯ ವಿಧಾನ ಸಭಾ ಚುನಾವಣೆಯ ಹಿನ್ನಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗೃಹರಕ್ಷಕರನ್ನು ನೇಮಿಸಬೇಕಾಗಿರುವುದರಿಂದ ದ.ಕ ಜಿಲ್ಲಾ ಗೃಹರಕ್ಷಕದಳದ ಸಮಾದೇಷ್ಟ ಮತ್ತು ಪೌರರಕ್ಷಣಾ ಪಡೆಯ ಮುಖ್ಯಪಾಲಕರಾದ ಡಾ|| ಮುರಲೀ ಮೋಹನ್ ಚೂಂತಾರು ಅವರು ಬೆಳ್ಳಾರೆ ಗೃಹರಕ್ಷಕದಳಕ್ಕೆ ಫೆ. 19 ರಂದು ಭೇಟಿ ನೀಡಿದರು. ನಿಷ್ಕ್ರಿಯ ಗೃಹರಕ್ಷಕರನ್ನು ತೆಗೆದುಹಾಕಿ ಹೆಚ್ಚು ಕ್ರೀಯಾಶೀಲ ಗೃಹರಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಘಟಕಾಧಿಕಾರಿ ಶ್ರೀ ವಸಂತ್ ಕುಮಾರ್ ಅವರಿಗೆ ಸೂಚನೆ ನೀಡಿದರು. ಎಲ್ಲಾ ಗೃಹರಕ್ಷಕರು ತಮ್ಮ ಸದಸ್ಯತ್ವ ನವೀಕರಣಗೊಳಿಸಿ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಮಾಡಿಸಿಕೊಂಡು ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಿದರು. ಪದೇ ಪದೇ ಕಾರಣವಿಲ್ಲದೆ ವಾರದ ಕವಾಯತಿಗೆ ಗೈರುಹಾಜರಾಗುವ ಮತ್ತು ಬಂದೋಬಸ್ತ್ ಕರ್ತವ್ಯಗಳಿಗೆ ಬಾರದೇ ಇರುವ ಗೃಹರಕ್ಷಕರ ಮೇಲೆ ಶಿಸ್ತಿನ ಕ್ರಮ ಕೈಗೊಳ್ಳುವಂತೆ ಘಟಕಾಧಿಕಾರಿಗೆ ಸೂಚನೆ ನೀಡಿದರು. ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಗೆ ಎಲ್ಲಾ ಗೃಹರಕ್ಷಕರು ನೊಂದಾಯಿಸಿಕೊಳ್ಳುವಂತೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಗೃಹರಕ್ಷಕರಾದ ರಾಮಚಂದ್ರ, ನಾರಾಯಣ ಮಣಿಯಾಣಿ, ಅಶ್ವಿನಿ, ದೇವಿಪ್ರಸಾದ್, ದಿನೇಶ್,ಬಾಲ ಸುಬ್ರಹ್ಮಣ್ಯ,ಗೋಪಿಕ್ ಮುಂತಾದವರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading