ವಿದ್ಯಾರ್ಥಿ ದಿಸೆಯಲ್ಲಿಯೇ ನಾಯಕತ್ವ ಗುಣ, ಸೇವಾ ಮನೊಭಾವ ರೂಡಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹಾಗೂ ಗುತ್ತಿಗಾರು ಕ್ರಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ ಹೇಳಿದರು. ಅವರು ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ,
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯ ಬೆಂಗಳೂರು .ರಾಷ್ಟ್ರೀಯ ಸೇವಾ ಯೋಜನೆ, ಕುರುಂಜಿ ವೆಂಕಟ್ರಮಣಗೌಡ ಪಾಲಿಟೆಕ್ನಿಕ್ ಸುಳ್ಯ ಇದರ ಜಂಟಿ ಸಹಭಾಗಿತ್ವದಲ್ಲಿ ಆಯೋಜಿಸಿದ ದಕ್ಷಿಣ ಕರ್ನಾಟಕ ವಿಭಾಗೀಯ ಮಟ್ಟದ ಅಂತರ್ ಪಾಲಿಟೆಕ್ನಿಕ್ ಎನ್ಎಸ್ಎಸ್ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ವಳಲಂಬೆ ಯಲ್ಲಿ ನಡೆಯುತ್ತಿರುವ ಶಿಬಿರದ ಅಧ್ಯಕ್ಷತೆ ವಹಿಸಿದ್ದ ಕೆ.ವಿ.ಜಿ ಪಾಲಿಟೆಕ್ನಿಕ್ ನ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಮಾತನಾಡುತ್ತಾ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಎನ್ಎಸ್ಎಸ್ ಶಿಬಿರಗಳು ಮಾರ್ಗದರ್ಶಕವಾಗುತ್ತದೆ. ಸದ್ಯದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಆಮೂಲಾಗ್ರವಾದ ಬದಲಾವಣೆಗಳಾಗಿವೆ. ಇದನ್ನು ಮನಗಂಡು ವಿದ್ಯಾರ್ಥಿಗಳು ತಮ್ಮ ಆಸಕ್ತಿಗೆ ಅನುಗುಣವಾಗಿ ತರಬೇತಿಯನ್ನು ಹೊಂದುವುದು ಅವಶ್ಯಕ ಆ ನಿಟ್ಟಿನಲ್ಲಿ ಎನ್ನೆಸ್ಸೆಸ್ ಶಿಬಿರದಲ್ಲಿ ಸಿಗುವ ಅನುಭವಗಳು ವಿದ್ಯಾರ್ಥಿಗಳಲ್ಲಿ ಮೌಲ್ಯವರ್ಧನೆಗೆ ಸಹಕಾರಿಯಾಗುತ್ತವೆ ಎಂದು ಹೇಳಿದರು. ಕಾಲೇಜಿನ ಪ್ರಾಂಶುಪಾಲ ಜಯಪ್ರಕಾಶ ಕೆ, ಉಪ ಪ್ರಾಂಶುಪಾಲ ಶ್ರೀಧರ್ ಎಂ.ಕೆ, ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಸುರೇಶ್, ಸರಕಾರಿ ನೌಕರರ ಸಂಘದ ಸುಳ್ಯ ಘಟಕಾಧ್ಯಕ್ಷ ತೀರ್ಥರಾಮ ಎಚ್‌ವಿ , ಎಸ್ .ಡಿ.ಎಂ.ಸಿ ಅಧ್ಯಕ್ಷ ಶ್ರೀ ರವೀಶ್ ಕುಮಾರ್, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಪುರುಲುಮಕ್ಕಿ, ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬೆಳ್ಯಪ್ಪ ಗೌಡ, ಶಾಲಾ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ವಿ ಎಸ್ , ಸೇವಾ ಸಂಗಮದ ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್ ಉಪಸ್ಥಿತರಿದ್ದು ಶುಭ ಹಾರೈಸಿದರು.ಶಿಬಿರಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಸ್ತಾವನೆ ಮಾಡಿ ಸ್ವಾಗತಿಸಿದರು. ಸುನಿಲ್ ಕುಮಾರ್ ಎನ್ ಪಿ ವಂದಿಸಿದರು. ಘಟಕದ ನಾಯಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವೇದಿಕೆಯಲ್ಲಿ ದ್ದರು. ಕಾರ್ಯಕ್ರಮದ ಆರಂಭದಲ್ಲಿ ಸ್ವಯಂಸೇವಕಿಯರಾದ ಅಕ್ಷತಾ, ಮಧುಶ್ರೀ, ಜೇಷ್ಮ ಪ್ರಾರ್ಥನೆ ಯೊಂದಿಗೆ ಆರಂಭವಾದ ಕಾರ್ಯಕ್ರಮವನ್ನು ಶಿಕ್ಷಕ ನಾರಾಯಣ ತೋರಣಗಂಡಿ ನಿರೂಪಿಸಿದರು.
- Thursday
- November 21st, 2024