ಬೇಂಗಮಲೆಯಲ್ಲಿ ತ್ಯಾಜ್ಯ ಎಸೆದವರಿಗೆ ದಂಡ ವಿಧಿಸಿ ವಿಲೇವಾರಿ ಮಾಡಿಸಿದ ಗ್ರಾಮ ಪಂಚಾಯತ್
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ಫೆ.15 ರಂದು ತ್ಯಾಜ್ಯ ಎಸೆದ ಸುಳ್ಯದ ನಿವಾಸಿಗಳಿಗೆ ರೂ 6000.00 ದಂಡ ವಿಧಿಸಿದ ಘಟನೆ ನಡೆದಿದೆ.
ಫೆ 15 ರಂದು ಬೇಂಗಮಲೆ ಪರಿಸರದಲ್ಲಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಎಸೆದು ಹೋಗಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ಸ್ಥಳಕ್ಕೆ ಭೇಟಿ ನೀಡಿ ಸಿ ಸಿ ಕ್ಯಾಮರ ದೃಶ್ಯ ಪರಿಶೀಲಿಸಿ ಹಾಗೂ ಅಲ್ಲಿ ತ್ಯಾಜ್ಯ ಎಸೆದ ಬ್ಯಾಗ್ ಗಳನ್ನು ಪರಿಶೀಲಿಸಿ ತ್ಯಾಜ್ಯ ಬಿಸಾಡಿದ ಸುಳ್ಯದ ಯುವಕನನ್ನು ಫೆ.21 ರಂದು ಪತ್ತೆ ಹಚ್ಚಿ ಫೆ ರೂ 6000.00 ದಂಡ ವಿಧಿಸಲಾಯಿತು. ಬಳಿಕ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಯಿತೆಂದು ತಿಳಿದುಬಂದಿದೆ.