Ad Widget

ಮಾ .11; ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಅಂಗವಾಗಿ ಸುಳ್ಯದಲ್ಲಿ ರೋಡ್ ಶೋ

. . . . . . . . .

ರಾಜ್ಯ ಬಿಜೆಪಿ ನೇತೃತ್ವದಲ್ಲಿ ಈಗಾಗಲೇ ಆರಂಭಗೊಂಡಿರುವ ವಿಜಯ ಸಂಕಲ್ಪ ಯಾತ್ರೆ ಮಾ.11 ರಂದು ಸುಳ್ಯಕ್ಕೆ ಆಗಮಿಸಲಿದೆ. ಸುಳ್ಯದಲ್ಲಿ ಅದ್ದೂರಿ ರೋಡ್ ಶೋ ನಡೆಸಲು ಈಗಾಗಲೇ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಮಾ.11 ರಂದು ಬೆಳಗ್ಗೆ ಮಡಿಕೇರಿಯಿಂದ ಹೊರಡುವ ವಿಜಯ ಸಂಕಲ್ಪ ಯಾತ್ರೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಂಪಾಜೆಗೆ ಬರಲಿದೆ. ಅಲ್ಲಿ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಯಾತ್ರೆಯನ್ನು ಸ್ವಾಗತಿಸಲಾಗುವುದು. ಬಳಿಕ ಸಂಪಾಜೆ, ಅರಂತೋಡು ಮಾರ್ಗವಾಗಿ ಬರಲಿರುವ ರಥ ಮಧ್ಯಾಹ್ನ 2.30 ರ ಸುಮಾರಿಗೆ ಸುಳ್ಯದ ವಿಷ್ಣು ಸರ್ಕಲ್ ಬಳಿ ಬರಲಿದೆ. ಅಲ್ಲಿಂದ ರೋಡ್ ಶೋ ಆರಂಭವಾಗುವುದು. ಸುಳ್ಯ ಪೇಟೆಯಾಗಿ ಸಂಚರಿಸಲಿದೆ.
ವಿಜಯ ಸಂಕಲ್ಪ ಯಾತ್ರೆಯಲ್ಲಿ ಸಚಿವರುಗಳು, ಬಿಜೆಪಿ ರಾಜ್ಯ ನಾಯಕರು, ಜಿಲ್ಲಾ ನಾಯಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading