Ad Widget

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ ಸುಳ್ಯ ತಾಲೂಕಿನಲ್ಲಿ 1728 ವಿದ್ಯಾರ್ಥಿಗಳು – 3 ಪರೀಕ್ಷಾ ಕೇಂದ್ರಗಳು

. . . . . . .

ಮಾರ್ಚ್‌ 9ರಿಂದ ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ನಡೆಯಲಿದೆ.

ಸುಳ್ಯ ತಾಲೂಕಿನಲ್ಲಿ ಪರೀಕ್ಷೆ ಬರೆಯಲು 1728 ವಿದ್ಯಾರ್ಥಿಗಳು ನೋಂದಾವಣೆ ಮಾಡಿ ಕೊಂಡಿದ್ದಾರೆ. ಸುಳ್ಯ ತಾಲೂಕಿನಲ್ಲಿ ಸುಳ್ಯ ಸರಕಾರಿ ಪದವಿ ಪೂರ್ವ ‌ಕಾಲೇಜು ಹಾಗೂ ಗಾಂಧಿನಗರ ಪದವಿ ಪೂರ್ವ ಕಾಲೇಜು ಸೇರಿ 2 ಮತ್ತು ಸುಬ್ರಹ್ಮಣ್ಯ ಸೇರಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಸುಳ್ಯ ತಾಲೂಕಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಸುಳ್ಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 661 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನೆಹರೂ‌ ಸ್ಮಾರಕ ಪದವಿ ಪೂರ್ವ ಕಾಲೇಜು ಸುಳ್ಯ, ಗಾಂಧಿನಗರ ಸರಕಾರಿ ಪದವಿಪೂರ್ವ ಕಾಲೇಜು, ಶ್ರೀ ಶಾರದಾ ಮಹಿಳಾ ಪದವಿ ಪೂರ್ವ ಕಾಲೇಜು, ಕೆವಿಜಿ ಅಮರ ಜ್ಯೋತಿ ಪದವಿಪೂರ್ವ ಕಾಲೇಜು, ಐವರ್ನಾಡು ಸರಕಾರಿ ಪದವಿಪೂರ್ವ ಕಾಲೇಜು, ಬೆಳ್ಳಾರೆ ಸರಕಾರಿ ಪದವಿಪೂರ್ವ ಕಾಲೇಜು ಹಾಗು ಸಂಪಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಗಾಂಧಿನಗರ ಸರಕಾರಿ ಪದವಿಪೂರ್ವ ಕಾಲೇಜು ಕೇಂದ್ರದಲ್ಲಿ 569 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು, ರೋಟರಿ ಪದವಿ ಪೂರ್ವ ಕಾಲೇಜು ಹಾಗೂ ನೆಹರೂ ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಇಲ್ಲಿನ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಸುಬ್ರಹ್ಕಮಣ್ಯ ಎಸ್‌ಎಸ್‌ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ 498 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜು, ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು, ಪಂಜ ಸರಕಾರಿ ಪದವಿ ಪೂರ್ವ ಕಾಲೆಜಿನ ವಿದ್ಯಾರ್ಥಿಗಳು ಇಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ.

ಪರೀಕ್ಷೆಗೆ ಎಲ್ಲಾ ಸಿದ್ಧತೆಗಳು ಪೂರ್ತಿಯಾಗಿದೆ ಎಂದು ಪರೀಕ್ಷಾ ಕೇಂದ್ರ ಕಾಲೇಜುಗಳ ಪ್ರಾಂಶುಪಾಲರುಗಳು ಮಾಹಿತಿ ನೀಡಿದ್ದಾರೆ.

ಇಂದು ಕನ್ನಡ ಪರೀಕ್ಷೆ ನಡೆಯುವುದು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!