
ಬಿಜೆಪಿ ವಿಜಯ ಸಂಕಲ್ಪ ಯಾತ್ರೆಗೆ ಸುಳ್ಯದಲ್ಲಿ ಭವ್ಯ ಸ್ವಾಗತ ನೀಡಲಾಯಿತು. ಬಳಿಕ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು. ರ‌್ಯಾಲಿಯಲ್ಲಿ ಬಿಜೆಪಿ ಪ್ರಮುಖ ನಾಯಕರುಗಳಾದ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಸಚಿವ ಅಂಗಾರ,ಈಶ್ವರಪ್ಪ, ಇಂಧನ ಸಚಿವ ಸುನಿಲ್ ಕುಮಾರ್, ಸ್ಥಳೀಯ ನಾಯಕರುಗಳು ಹಾಗೂ ಸಾವಿರಾರು ಕಾರ್ಯಕರ್ತರು ಉಪಸ್ಥಿತರಿದ್ದರು.




