




ಸುಳ್ಯ ತಾಲೂಕಿನ ಕೊಡಿಯಾಲ ಗ್ರಾ.ಪಂ. ನ ಸ್ವಚ್ಚತಾ ಅಭಿಯಾನ ಸಂಭ್ರಮ – 2, ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂ, ಶ್ರೀ ದತ್ತಾಂಜನೇಯ ಕ್ಷೇತ್ರ ದಕ್ಷಿಣ ಗಾಣಗಾಪುರದ ಪರಮಪೂಜ್ಯ ಶ್ರೀ ಶ್ರೀ ಗುರುದೇವಾನಂದ ಸ್ವಾಮಿಗಳವರು, ಮಾಣಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರ “ಶ್ರೀಧಾಮ” ಮಾಣಿಲದ ಪರಮಪೂಜ್ಯ ಯೋಗಿ ಕೌಸ್ತುಭ, ಕರ್ಮಯೋಗಿ ಶ್ರೀ ಶ್ರೀ ಮೋಹನದಾಸ್ ಪರಮಹಂಸ ಸ್ವಾಮೀಜಿಯವರು, ಕೊಡಿಯಾಲ ಗ್ರಾ.ಪಂ.ಅಧ್ಯಕ್ಷರಾದ ಪ್ರದೀಪ್ ರೈ ಅಜ್ರಂಗಳ, ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ-ಸಕ್ರಮ ಸಮಿತಿಯ ಸದಸ್ಯರಾದ ರಾಕೇಶ್ ರೈ ಕೆಡೆಂಜಿ, ಕೇರ್ಪಡ ಶ್ರೀ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ವಸಂತ ನಡುಬೈಲು, ಮಾಜಿ ಜಿ.ಪಂ.ಸದಸ್ಯರಾದ ಹರೀಶ್ ಕಂಜಿಪಿಲಿ, ಸುಳ್ಯ ಸಿ.ಎ.ಬ್ಯಾಂಕ್ ಮಾಜಿ ಅಧ್ಯಕ್ಷರಾದ ಸುಬೋಧ್ ಶೆಟ್ಟಿ ಮೇನಾಲ, ಸುಳ್ಯ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್, ಪುತ್ತೂರು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ವಕೀಲರಾದ ಯತೀಶ ಆರ್ವಾರ ಸೇರಿದಂತೆ ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.