Ad Widget

ಮಾ. 24 : ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವರಿಗೆ ದೃಢ ಕಲಶಾಭಿಷೇಕ

. . . . . . . . .

ಇತ್ತೀಚೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದ ಕಾಯರ್ತೋಡಿಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರಿಗೆ ದೃಢಕಲಶಾಭಿಷೇಕವು ಮಾ. 24 ರಂದು ನಡೆಯಲಿದೆ.
ಮಾ. 23 ರಂದು ಶುದ್ಧಿ ಕಲಶ ಪ್ರಕ್ರಿಯೆಗಳು ನಡೆದು, ಮಾ. 24 ರ ಬೆಳಿಗ್ಗೆ 7 ರಿಂದ ಶ್ರೀ ಗಣಪತಿ ಹವನ ನಡೆದ ಬಳಿಕ, ಪೂರ್ವಾಹ್ನ 9 ಕ್ಕೆ ದೃಢಕಲಶಾಭಿಷೇಕ ನಡೆಯಲಿದೆ. ಬಳಿಕ ಸಭಾ ಕಾರ್ಯಕ್ರಮ ನಡೆಯಲಿದ್ದು, ಬ್ರಹ್ಮಶ್ರೀ ವೇದಮೂರ್ತಿ ದೇಲಂಪಾಡಿ ಗಣೇಶ ತಂತ್ರಿವರ್ಯರು ಆಶೀರ್ವಚನ ನೀಡಲಿದ್ದಾರೆ.

. . . . . . .

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಕೆ. ಉಮೇಶ್ ಅಧ್ಯಕ್ಷತೆ ವಹಿಸಲಿದ್ದು, ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ. ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಕೆ. ಕೃಷ್ಣ ಕಾಮತ್ ಮುಖ್ಯ ಅಭ್ಯಾಗತರಾಗಿ ಉಪಸ್ಥಿತರಿರುವರು. ಅಭ್ಯಾಗತರಾಗಿ ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಕುಸುಮಾಧರ ಎ.ಟಿ., ಕೋಶಾಧಿಕಾರಿ ಹರೀಶ್ ರೈ ಉಬರಡ್ಕ, ಆರ್ಥಿಕ ಸಮಿತಿ ಸಂಚಾಲಕ ನಾರಾಯಣ ಕೇಕಡ್ಕ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಶ್ರೀ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading