ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಮತ್ತು ಸಾಂದೀಪನಿ ವಿಶೇಷ ಮಕ್ಕಳ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ವಿಶ್ವ ಬಾಯಿಯ ಆರೋಗ್ಯ ದಿನ ಆಚರಣೆಯು ಸುಳ್ಯ ಸಾಂದೀಪನಿ ವಿಶೇಷ ಮಕ್ಕಳ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪ್ರಾಂಶುಪಾಲೆ ಡಾ.ಮೋಕ್ಷಾ ನಾಯಕ್ ಉದ್ಘಾಟಿಸಿ ಮಾತನಾಡಿದ ಅವರು ವ್ಯಕ್ತಿಯ ವ್ಯಕ್ತಿತ್ವ ಮತ್ತು ಬೆಳವಣಿಗೆಯಲ್ಲಿ ಬಾಯಿಯ ಆರೋಗ್ಯ ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಎಂದು ಹೇಳಿದರು. ಎಂ.ಬಿ.ಫೌಂಡೇಶನ್‌ನ ಅಧ್ಯಕ್ಷ ಎಂ.ಬಿ. ಸದಾಶಿವ ಮಾತನಾಡಿ, ವಿಶೇಷ ಮಕ್ಕಳನ್ನು ಗುರುತಿಸಿ, ಅವರ ಆರೋಗ್ಯದ ಕಡೆಗೆ ಗಮನ ಹರಿಸಿದ ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಕಾಳಜಿ ಶ್ಲಾಘನೀಯ ಎಂದರು.
ವೇದಿಕೆಯಲ್ಲಿ ಕೆ.ವಿ.ಜಿ ದಂತ ಮಹಾ ವಿದ್ಯಾಲಯದ ವಿಭಾಗ ಮುಖ್ಯಸ್ಥ ಡಾ. ಎಂ.ಎಂ.ದಯಾಕರ್, ಪ್ರಾಧ್ಯಾಪಕ ಡಾ. ಮಹಾಬಲೇಶ್ವರ ಸಿ.ಎಚ್., ಡಾ. ಮನೋಜ್‌ಕುಮಾರ್ ಅಡ್ಡಂತಡ್ಕ, ಆಡಳಿತಾಧಿಕಾರಿ ಮಾಧವ ಬಿ.ಟಿ., ಸಾಂದೀಪ್ ವಿಶೇಷ ಮಕ್ಕಳ ಶಾಲೆಯ ಮುಖ್ಯೋಪಾಧ್ಯಾಯಿನಿ ಹರಿಣಿ ಸದಾಶಿವ ಉಪಸ್ಥಿತರಿದ್ದರು. ಬಾಯಿಯ ಆರೋಗ್ಯದ ಬಗ್ಗೆ ಡಾ. ಎಂ.ಎಂ.ದಯಾಕರ್ ಉಪನ್ಯಾಸ ನೀಡಿದರು. ಕೆ.ವಿ.ಜಿ ದಂತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯ ವಂದಿಸಿದರು.
- Thursday
- November 21st, 2024